ರುದ್ರೇಶ್ ಹತ್ಯೆ ಆರೋಪಿಗಳನ್ನು ಬಂಧಿಸದಿದ್ರೆ ಕರ್ನಾಟಕ ಬಂದ್: ಯಡಿಯೂರಪ್ಪ ವಾರ್ನಿಂಗ್

ಬುಧವಾರ, 19 ಅಕ್ಟೋಬರ್ 2016 (14:49 IST)
ಹಾಡುಹಗಲೇ ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವಾರದಲ್ಲಿ ಆರೋಪಿಗಳನ್ನು ಬಂಧಿಸದಿದ್ದರೆ ಕರ್ನಾಟಕ ಬಂದ್ ಮಾಡುತ್ತೇವೆ. ಈ ಕುರಿತು ಮುಂದಿನ ವಾರ ದಿನಾಂಕ ನಿಗದಿ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
 
ಲಜ್ಜೆಗೆಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕಿಂಚಿತ್ತೂ ಮಾನ ಮರ್ಯಾದೆ ಇಲ್ಲ. ವಿನಾಶ ಕಾಲೇ ವಿಪರೀತ ಬುದ್ಧಿ ಎಂಬಂತೆ ಸಿಎಂ ವರ್ತಿಸುತ್ತಿದ್ದಾರೆ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಡೆದ ಒಂಟಿ ಮಹಿಳೆಯರ ಹತ್ಯೆ ಪ್ರಕರಣಗಳನ್ನು ಪಟ್ಟಿ ಮಾಡುತ್ತೇವೆ. ರಾಜ್ಯ ಸರಕಾರ ಕರ್ನಾಟಕ ರಾಜ್ಯವನ್ನು ಕೇರಳ, ಬಿಹಾರ್ ಮಾಡಲು ಹೊರಟಿದೆ. ಇಂತಹ ಕೊಲೆಗಡುಕ ಸರಕಾರ ಅಧಿಕಾರದಲ್ಲಿರಬೇಕಾ ಎಂದು ಪ್ರಶ್ನಿಸಿದರು.
 
ಪೊಲೀಸ್ ಇಲಾಖೆಗೆ ಕರೆ.....
 
ಒಂದೂವರೆ ವರ್ಷದ ಮೇಲೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇರುವುದಿಲ್ಲ. ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದ ಆರೋಪಿಗಳನ್ನು ಒಂದು ವಾರದಲ್ಲಿಯೇ ಬಂಧಿಸಿ. ನಿಮ್ಮ ಜೊತೆ ನಾವಿದ್ದೇವೆ ಎಂದು ಬಿಎಸ್‌ವೈ ಪೊಲೀಸ್ ಇಲಾಖೆಗೆ ಕರೆ ನೀಡಿದ್ದಾರೆ. 
 
 
ಸಿಎಂ ಕೈಬಿಸಿ ಮಾಡಿದ್ರೆ ಮಂತ್ರಿಗಿರಿ........
 
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಹೇಳಿಕೆಯಂತೆ, ಸಿಎಂ ಸಿದ್ದರಾಮಯ್ಯ ಕೈಬಿಸಿ ಮಾಡುವವರಿಗೆ ಮಾತ್ರ ಮಂತ್ರಿಗಿರಿ ಎನ್ನುವುದು ಸಾಬೀತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ