ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕರು, ಆಪರೇಷನ್ ಕಮಲಕ್ಕೆ ಒಳಗಾಗಿದ್ದೇವೆಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಿಬಿಡಲಾಗಿದೆ. ಸ್ಪೀಕರ್ ರಮೇಶ್ ಕುಮಾರ್ ಅವರ ಮೇಲೂ ಇಂತಹ ಆರೋಪ ಬಂದಿದೆ. ಹೀಗಾಗಿ ಅಧಿವೇಶನವೇ ಸರಿಯಾಗಿ ನಡೆಯಲಿಲ್ಲ. ಹಣ ಪಡೆದಿದ್ದೇವೆ ಎನ್ನುವ ಆರೋಪದಿಂದಾಗಿ ಮನಸ್ಸಿಗೆ ತುಂಬಾ ನೋವಾಗಿದೆ. ಇದರಿಂದಾಗಿ ಮಾನಸಿಕವಾಗಿ ನೊಂದಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ನಾನು ಈಗ ಕಾಂಗ್ರೆಸ್‍ನಲ್ಲಿ ಇದ್ದೇನೆ ಅಷ್ಟೇ. ಮುಂದೆ ಏನಾಗುತ್ತದೆ ಎನ್ನುವುದು ಗೊತ್ತಿಲ್ಲ. ಕಾಂಗ್ರೆಸ್ ನಾಯಕರು ನೋಟಿಸ್ ನೀಡಿದ್ದಾರೆ. ಅದಕ್ಕೆ ಸದ್ಯದಲ್ಲಿಯೇ ಉತ್ತರ ನೀಡುತ್ತೇನೆ. ನನ್ನನ್ನು ಸಮಾಧಾನಪಡಿಸಲು ಮಂತ್ರಿ ಸ್ಥಾನ ನೀಡುತ್ತೇನೆ ಎನ್ನುತ್ತಾರೆ. ಆದರೆ ನಾನೇ ಬೇಡವೆಂದು ಹೇಳುತ್ತಿರುವೆ. ಆಮಿಷಕ್ಕೆ ಒಳಗಾಗದರೆ ಕ್ಷೇತ್ರದ ಅಭಿವೃದ್ಧಿಯಾಗಲ್ಲ ಎಂದು ಮಂತ್ರಿಗಿರಿ ಆಕಾಂಕ್ಷೆಯನ್ನು ವ್ಯಕ್ತಪಡಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.