ಖಾಸಗಿ ಸುದ್ದಿ ವಾಹಿನಿಯೊಂದಿಗೆ ಮಾತನಾಡಿದ ಅವರು, ಐಟಿ ದಾಳಿಯ ವೇಳೆ ಸಿಕ್ಕಿರುವುದು 41 ಸಾವಿರ ರೂಪಾಯಿ ಮಾತ್ರ. 41 ಲಕ್ಷ ಅಲ್ಲ. ಒಂದು ವೇಳೆ 41 ಲಕ್ಷ ರೂಪಾಯಿ ಪತ್ತೆಯಾಗಿರುವ ಸಂಗತಿ ನಿಜವಾದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ನನ್ನ ರಾಜೀನಾಮೆ ಬಯಸಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ. ಆದರೆ, ಈವರೆಗೂ ರಾಜೀನಾಮೆ ಕೇಳಿಲ್ಲ, ಕೇಳುವುದು ಇಲ್ಲ ಎಂದು ಸಣ್ಣ ಕೈಗಾರಿಕಾ ಸಚಿವ ರಮೇಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.