ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಿದರೆ ಎಲ್ಲವೂ ಸರಿಯಾಗುತ್ತದೆ: ನಾಲಿಗೆ ಹರಿಬಿಟ್ಟ ಸ್ವಾಮೀಜಿ

Sampriya

ಮಂಗಳವಾರ, 26 ನವೆಂಬರ್ 2024 (19:23 IST)
Photo Courtesy X
ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡಬೇಕು. ಆಗ ದೇಶದಲ್ಲಿ ಎಲ್ಲವೂ ಸರಿಯಾಗುತ್ತದೆ ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ವಕ್ಫ್ ಕಾಯಿದೆ ವಿರುದ್ಧವಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿಯ ಸಹ ಸಂಘಟನೆಯಾದ ಭಾರತೀಯ ಕಿಸಾನ್ ಸಂಘ ಆಯೋಜಿಸಿದ ಪ್ರತಿಭಟನೆಯಲ್ಲಿ ಭಾಗಿಯಾಗಿ ಅವರು ಮಾತನಾಡಿದ ಸ್ವಾಮೀಜಿ, ದೇಶದಲ್ಲಿ ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಬೇಕು. ಮುಸ್ಲಿಂ ಜನಾಂಗಕ್ಕೆ ಮತದಾನದ ಹಕ್ಕೇ ಇಲ್ಲದಂತೆ ಕಾನೂನು ಮಾಡಿದರೆ ಎಲ್ಲವೂ ಸರಿಯಾಗುತ್ತದೆ ಎಂದು ನಾಲಿಗೆ ಹರಿಬಿಟ್ಟಿದ್ದಾರೆ.

ಪಾಕಿಸ್ತಾನದಲ್ಲಿ ಬೇರೆಯವರಿಗೆ ಮತ ಹಾಕುವ ಅಧಿಕಾರವಿಲ್ಲ. ಅದೇ ರೀತಿ ನಮ್ಮ ಭಾರತದಲ್ಲಿಯೂ ಮುಸ್ಲಿಮರಿಗೆ ಮತದಾನ ಮಾಡುವ ಹಕ್ಕಿಲ್ಲದಂತೆ ಮಾಡಿದರೆ ಅವರು ಅವರ ಪಾಡಿಗಿರುತ್ತಾರೆ. ಖಂಡಿತವಾಗಿಯೂ ಎಲ್ಲರೂ ನೆಮ್ಮದಿಯಾಗಿ ಇರಲು ಸಾಧ್ಯ ಎಂದಿದ್ದಾರೆ.

ಈ ಹಿಂದೆಯೂ ಚಂದ್ರಶೇಖರ ಅವರು ವಿವಾದಾತ್ಮಕ ಹೇಳಿಕೆಗಳ ಮೂಲಕ ಸುದ್ದಿಯಾಗಿದ್ದರು. ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕ ಇಬ್ಭಾಗವಾಗಬೇಕು. ಹಾಗಾದರೆ ಮಾತ್ರ ಉತ್ತರ ಕರ್ನಾಟಕ ಅಭಿವೃದ್ಧಿ ಸಾಧ್ಯ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಚಂದ್ರಶೇಖರ ಅವರ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಇವೆಲ್ಲ ಉತ್ತರ ಪ್ರದೇಶದಿಂದ ಆಮದಾಗಿರುವ ಮಾತುಗಳಾಗಿವೆ, ಮೋದಿ ಮತ್ತು ಅಮಿತ್ ಶಾ ಅವರನ್ನು ಮೆಚ್ಚಿಸಲು ಈ ಸ್ವಾಮಿಗಳು ನೋಡುತ್ತಿದ್ದಾರೆ. ಇಂದು ಮುಸ್ಲಿಮರಿಗೆ ಹೀಗೆ ಹೇಳುತ್ತಾರೆ, ಮುಂದಿನ ದಿನಗಳಲ್ಲಿ ಈ ಪಾಳೇಗಾರಿ ಸ್ವಾಮಿಗಳು ನಮ್ಮ ಮಾತು ಕೇಳುತ್ತಿಲ್ಲ ಎಂದು ಇಲ್ಲಿನ ಹಿಂದುಳಿದ ಇತರ ವರ್ಗಗಳು, ಮಹಿಳೆಯರಿಗೆ ಮತ್ತು ದಲಿತರಿಗೂ ಹೀಗೆ ಹೇಳುತ್ತಾರೆ ಎಂದು ದಲಿತ ಹೋರಾಟಗಾರರೊಬ್ಬರು ಹೇಳಿದ್ದಾರೆ.

ಇಂದು ಮುಸ್ಲಿಮರಿಗೆ ಹೀಗೆ ಹೇಳುತ್ತಾರೆ. ಮುಂದಿನ ದಿನಗಳಲ್ಲಿ ಈ ಪಾಳೇಗಾರಿಕೆ ಮನಸ್ಥಿತಿಯ ಸ್ವಾಮಿಗಳು ನಮ್ಮ ಮಾತು ಕೇಳುತ್ತಿಲ್ಲ ಎಂದು ಇಲ್ಲಿನ ಹಿಂದುಳಿದ ವರ್ಗಗಳ ಇತರ ಸಮುದಾಯಗಳಿಗೆ ಮತ್ತು ದಲಿತರಿಗೂ ಹೀಗೆ ಹೇಳುತ್ತಾರೆ ಎಂದು ಅಭಿಪ್ರಾಯವೂ ವ್ಯಕ್ತವಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ