ವೋಟು ಹಾಕಲು ಬರದಿದ್ದರೆ, ನನ್ನ ಅಂತ್ಯಸಂಸ್ಕಾರಕ್ಕಾದರೂ ಬನ್ನಿ: ಮಲ್ಲಿಕಾರ್ಜುನ ಖರ್ಗೆ ಭಾವುಕ ಮಾತು

Sampriya

ಬುಧವಾರ, 24 ಏಪ್ರಿಲ್ 2024 (20:31 IST)
Photo Courtesy X
ಅಫಜಲಪುರ: ಕರ್ನಾಟಕ ಮತ್ತು ಕಲಬುರ್ಗಿಗೆ ನಾನೇನಾದರೂ ಮಾಡಿದ್ದರೆ ವೋಟು ಹಾಕಲು ಬನ್ನಿ, ಇಲ್ಲದಿದ್ದರೆ ನಾನು ಸತ್ತ ಮೇಲೆ ನನ್ನ ಮಣ್ಣಿಗಾದರೂ ಬನ್ನಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾವುಕರಾದರು.

ಅಫಜಲಪುರದಲ್ಲಿ ಇಂದು ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ತಮ್ಮ ಅಳಿಯ, ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರ ಪರ ಮತಯಾಚಿಸಿ ಅವರು ಮಾತನಾಡಿದರು.

ಪಕ್ಷಕ್ಕೆ ಮತ ಹಾಕಲು ಬಯಸದಿದ್ದರೂ ಪರವಾಗಿಲ್ಲ. ನಾನು ಸತ್ತರೆ ನಮ್ಮ ಕೆಲಸಗಳನ್ನು ನೆನಪು ಮಾಡಿಕೊಂಡು ಮಣ್ಣು ಹಾಕಲು ಬನ್ನಿ. ಸತ್ತಾಗ ಸುಟ್ಟರೇ ಮೇಣದ ಬತ್ತಿ ಹಚ್ಚಲು ಬನ್ನಿ, ಹೂಳಿದ್ರೆ ಒಂದು ಹಿಡಿ ಮಣ್ಣು ಹಾಕಲು ಬನ್ನಿ. ಆಗ ಜನರು ನೋಡಪ್ಪ ಆತನ ಅಂತ್ಯಕ್ರಿಯೆಗೆ ಎಷ್ಟು ಜನ ಬಂದರೂ ಅಂತ ಹೇಳಬೇಕು ಎಂದು ಭಾವುಕರಾದರು.

ಇನ್ನೂ ನೀವೆನಾದರೂ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕದಿದ್ದರೆ ಕಲಬುರಗಿ ಜನರ ಮನಸಿನಲ್ಲಿ ನನಗೆ ಯಾವುದೇ ಸ್ಥಾನವಿಲ್ಲ ಎಂದರು.

ಕಲಬುರಗಿಯಲ್ಲಿ ಬಿಜೆಪಿಯ ಹಾಲಿ ಸಂಸದ ಉಮೇಶ್ ಜಾಧವ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರನ್ನು ಕಣಕ್ಕಿಳಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ