ಪ್ರಜ್ವಲ್‌ ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ, ಸಂತ್ರಸ್ತೆಯರ ಪರ ಜೆಡಿಎಸ್‌ ಇದೆ: ಜಿಟಿ ದೇವೇಗೌಡ

sampriya

ಶುಕ್ರವಾರ, 31 ಮೇ 2024 (14:26 IST)
ಹಾಸನ: ಈ ಹಿಂದೆಯೂ ಹೇಳಿದಂತೆ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ಜೆಡಿಎಸ್‌ ಪಕ್ಷ ಸಂತ್ರಸ್ತೆಯರ ಪರ.  ತನಿಖೆಯಲ್ಲಿ ಪ್ರಜ್ವಲ್‌ ರೇವಣ್ಣ ತಪ್ಪು ಮಾಡಿದ್ದರೆ ಶಿಕ್ಷೆ ನೀಡಲಿ ಎಂದು ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಹೇಳಿದರು.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್‌ ನಾಯಕ ಎಚ್‌ ಡಿ ಕುಮಾರಸ್ವಾಮಿ ಅವರು ಈ ಹಿಂದೆ  ಉಪ್ಪು ತಿಂದ ಮೇಲೆ ನೀರು ಕುಡಿಯಲೇಬೇಕು, ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು ಎಂದು ಹೇಳಿದ್ದರು. ಅದರಂತೆ ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ಇನ್ನೂ ಈ ಪ್ರಕರಣದಲ್ಲಿ ಪೆನ್‌ಡ್ರೈವ್‌ ಹಂಚಿಕೆ ಮಾಡಿದವರ ವಿರುದ್ಧವೂ ಸೂಕ್ತ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಇನ್ನೂ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌  ಪ್ರಕರಣದಲ್ಲಿ ನಮಗೆ ಯಾವುದೇ ಮುಜುಗರವಾಗಿಲ್ಲ. ಪ್ರಜ್ವಲ್‌ ಅಮಾನತು ಆಗಲಿ ಬಂಧನವಾಗಲಿ  ಪಕ್ಷಕ್ಕೆ ಯಾವುದೇ ಅಡ್ಡ ಪರಿಣಾಮವಾಗಿಲ್ಲ.

ಇನ್ನೂ ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ  ನಾವು ಎಸ್‌ಐಟಿ ತನಿಖೆಯನ್ನು ಸ್ವಾಗತಿಸಿದ್ದೆವು. ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ನಾವು ಸೇರಿ ಎಲ್ಲರೂ ಒತ್ತಾಯಿಸಿದ್ದೆವು. ಈಗ ಬಂಧನ ಆಗಿದೆ. ಅಲ್ಲಿಗೆ ನಮ್ಮ ಕೆಲಸ ಮುಗಿಯಿತು. ಎಸ್‌ಐಟಿ ತನಿಖೆ ಮುಂದುವರಿಸುತ್ತದೆ ಎಂದರು.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ