ಟ್ರೈನಿಗಳನ್ನು ಬಳಸಿಕೊಂಡು ಬಸ್ ಸಂಚಾರ ಆರಂಭಿಸಲು ಸರಕಾರ ಚಿಂತನೆ!

ಮಂಗಳವಾರ, 26 ಜುಲೈ 2016 (12:35 IST)
ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ನೌಕರರು ಕೈಗೊಂಡಿರುವ ಅನಿರ್ದಿಷ್ಟಾವಧಿ ಮುಷ್ಕರವನ್ನು ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗದಿದ್ದರೇ ಟ್ರೈನಿಗಳನ್ನು ನೇಮಕ ಮಾಡಿಕೊಂಡು ಸಾರಿಗೆ ಬಸ್ ಸಂಚಾರ ಆರಂಭಿಸಲು ಸರಕಾರ ಚಿಂತಿಸುತ್ತಿದೆ ಎಂದು ಸಾರಿಗೆ ಇಲಾಖೆಯ ಉನ್ನತ ಮೂಲಗಳು ಮಾಹಿತಿ ನೀಡಿವೆ.
 
ರಾಜ್ಯ ಸಾರಿಗೆ ನೌಕರರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯಾದ್ಯಂತ ಮುಷ್ಕರ ಕೈಗೊಂಡಿದ್ದು, ಮುಷ್ಕರ ನಿರತ ಚಾಲಕರು ಹಾಗೂ ನಿರ್ವಾಹಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಿರ್ಧರಿಸಿರುವ ಸರಕಾರ, ತರಬೇತಿ ಪಡೆಯುತ್ತಿರುವರನ್ನೇ ಸಾರಿಗೆ ಇಲಾಖೆಗೆ ನೇಮಕ ಮಾಡಿಕೊಂಡು ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಬಸ್‌ಗಳನ್ನು ಓಡಿಸಲು ಸರಕಾರ ಚಿಂತಿಸುತ್ತಿದೆ ಎಂದು ಹೇಳಲಾಗುತ್ತಿದೆ.
 
ಇಂದು ಸಂಜೆಯವರೆಗೆ ಸಾರಿಗೆ ಇಲಾಖೆ ನೌಕರರು ಕರ್ತವ್ಯಕ್ಕೆ ಹಾಜರಾಗದಿದ್ದರೇ, ಮುಷ್ಕರ ನಿರತ ಚಾಲಕರು ಹಾಗೂ ನಿರ್ವಾಹಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.
 
ಈಗಾಗಲೇ 15 ಸಾವಿರ ಟ್ರೈನಿಗಳಿದ್ದು, ಅವರನ್ನು ನೇಮಕ ಮಾಡಿಕೊಂಡು ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಬಸ್‌ಗಳನ್ನು ಓಡಿಸಲು ಸರಕಾರ ನಿರ್ಧರಿಸಿದ್ದು, ಈ ಕುರಿತು ಸಾರಿಗೆ ಇಲಾಖೆಯ 4 ಭಾಗಗಳ ಎಂಡಿಗಳೊಂದಿಗೆ ಚರ್ಚಿಸಿ ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ