ಶ್ರೀನಿವಾಸ್ ಪ್ರಸಾದ್ ಬಿಜೆಪಿಯಿಂದ ಸ್ಪರ್ಧಿಸಿದರೆ ಬೆಂಬಲವಿಲ್ಲ: ದೇವೇಗೌಡ

ಗುರುವಾರ, 22 ಡಿಸೆಂಬರ್ 2016 (17:31 IST)
ನಂಜನಗೂಡು ಉಪಚುನಾವಣೆಯಲ್ಲಿ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರು ಬಿಜೆಪಿಯಿಂದ ಸ್ಪರ್ಧೆ ಮಾಡಿದರೆ ನಮ್ಮ ಬೆಂಬಲವಿಲ್ಲ. ಪಕ್ಷೇತರರಾಗಿ ಸ್ಪರ್ಧೆ ಮಾಡಿದರೆ ಬೆಂಬಲ ನೀಡುತ್ತೇವೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಸ್ಪಷ್ಟಪಡಿಸಿದ್ದಾರೆ.
 
2ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಂಜನಗೂಡು ಉಪಚುನಾವಣೆಯಲ್ಲಿ ನಮ್ಮದು ಬಡ ಪಕ್ಷ. ಚುನಾವಣೆಯಲ್ಲಿ ಸಾಮಾನ್ಯ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ ಎಂದು ಹೇಳಿದರು. 
 
ಈ ದೇಶದಲ್ಲಿ ಸಿಬಿಐ ಹಾಗೂ ಇಡಿ ಇಲಾಖೆಯನ್ನು ಅಧಿಕಾರದಲ್ಲಿರುವ ರಾಷ್ಟ್ರೀಯ ಪಕ್ಷಗಳು ತಮ್ಮ ಅನುಕೂಲಕ್ಕೆ ಬಳಸಿಕೊಳ್ಳುತ್ತಿವೆ. ಈ ಕುರಿತು ಎಲ್ಲಾ ಗೊತ್ತಿದೆ. ಇದರಲ್ಲೇನೂ ವಿಶೇಷ ಇಲ್ಲ ಎಂದು ಆರೋಪಿಸಿದರು. 
 
ಜೆಡಿಎಸ್ ಪಕ್ಷದಿಂದ ಅಮಾನತಾಗಿರುವ 8 ಜನ ಬಂಡಾಯ ಶಾಸಕರಲ್ಲಿ ಗೋಪಾಲಯ್ಯ ಸೇರಿದಂತೆ ಎಲ್ಲರ ಭವಿಷ್ಯ ಶಿಸ್ತು ಸಮಿತಿಯ ಮುಂದೆ ಇದೆ. ಅವರು ಏನು ಶಿಫಾರಸು ಮಾಡುತ್ತಾರೋ ಅದರಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ