ಶಿಕ್ಷಕರು ತಮ್ಮ ಮೊಬೈಲ್‍ ಸ್ವಿಚ್ ಆಫ್ ಮಾಡಿದರೆ ಶಿಕ್ಷೆ ಖಚಿತ- ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಎಚ್ಚರಿಕೆ

ಮಂಗಳವಾರ, 12 ಮಾರ್ಚ್ 2019 (12:54 IST)
ರಾಯಚೂರು : ಶಿಕ್ಷಣ ಇಲಾಖೆ ಚುನಾವಣೆಯನ್ನ ಯಶಸ್ವಿಯಾಗಿ ನಿಭಾಯಿಸಬೇಕು ಎಂಬ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಖಡಕ್ ಆದೇಶವೊಂದನ್ನು  ಹೊರಡಿಸಿದ್ದಾರೆ.


ಲೋಕಸಭಾ ಚುನಾವಣೆ ಅಧಿಸೂಚನೆ ಪ್ರಕಟವಾದ ಹಿನ್ನಲೆಯಲ್ಲಿ  ರಾಯಚೂರಿನಲ್ಲಿ ಅಧಿಕಾರಿಗಳು ಹೈ ಅಲರ್ಟ್ ಆಗಿದ್ದು, ಜಿಲ್ಲೆಯ ಶಿಕ್ಷಣ ಇಲಾಖೆ ಸಿಬ್ಬಂದಿ ಯಾರೂ ತಮ್ಮ ಮೊಬೈಲ್‍ ಗಳನ್ನು ಸ್ವಿಚ್ ಆಫ್ ಮಾಡುವ ಹಾಗಿಲ್ಲ. ಒಂದು ವೇಳೆ ಸ್ವಿಚ್ ಆಫ್ ಮಾಡಿದ್ರೆ ಶಿಕ್ಷೆ ಖಚಿತ ಎಂದು ಜಿಲ್ಲೆಯ ಎಲ್ಲಾ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೆಶಕ ಬಿ.ಕೆ.ನಂದನೂರು ಕಟ್ಟು ನಿಟ್ಟಿನ ಆದೇಶ ಹೊರಡಿಸಿದ್ದಾರೆ.


ಯಾವುದೇ ಕಾರಣಕ್ಕೂ ಶಿಕ್ಷಣ ಇಲಾಖೆ ಸಿಬ್ಬಂದಿ ಮೊಬೈಲ್ ಸ್ವಿಚ್ ಆಫ್ ಆಗಬಾರದು. ಅನುಮತಿಯಿಲ್ಲದೆ ಯಾವುದೇ ಸಿಬ್ಬಂದಿ ಕೇಂದ್ರಸ್ಥಾನ ಬಿಟ್ಟು ತೆರಳಬಾರದು. ಚುನಾವಣಾ ತುರ್ತು ಸಂದರ್ಭದಲ್ಲಿ ಎಲ್ಲರೂ ಲಭ್ಯವಿರಬೇಕು ಇಲ್ಲದಿದ್ದರೆ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ