ಸಿಎಂ ಆರೋಪಗಳು ಸತ್ಯವಾದ್ರೆ ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ- ಬಿಎಸ್ ಯಡಿಯೂರಪ್ಪ
ಶುಕ್ರವಾರ, 8 ಫೆಬ್ರವರಿ 2019 (12:17 IST)
ಬೆಂಗಳೂರು : ಸುದ್ದಿಗೋಷ್ಠಿಯಲ್ಲಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ರಿಲೀಸ್ ಮಾಡಿದ ಬಿಜೆಪಿ ಆಪರೇಷನ್ ಕಮಲದ ಆಡಿಯೋ ಫೇಕ್ ಎಂದು ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ.
ದೋಸ್ತಿ ಸರ್ಕಾರದ ಬಜೆಟ್ ಮಂಡನೆಗೂ ಮುನ್ನ ಸುದ್ದಿಗೋಷ್ಠಿ ನಡೆಸಿದ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಅವರು ಬಿಜೆಪಿ ಆಪರೇಷನ್ ಕಮಲದ ಆಡಿಯೋ ರಿಲೀಸ್ ಮಾಡಿದ್ದರು. ಜೆಡಿಎಸ್ ಶಾಸಕ ನಾಗನಗೌಡರ ಪುತ್ರ ಶರಣಗೌಡ ಅವರಿಗೆ ಆಮಿಷವೊಡ್ಡಿ ಯಡಿಯೂರಪ್ಪ ಮಾತನಾಡಿರುವ ಮೊಬೈಲ್ ರೆಕಾರ್ಡಿಂಗ್ ಅನ್ನು ಸಿಎಂ ಹೆಚ್.ಡಿಕೆ ಬಿಡುಗಡೆ ಮಾಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿಎಸ್ ಯಡಿಯೂರಪ್ಪ ಅವರು,’ಸಿಎಂ ಹೇಳಿಕೆ ಸತ್ಯಕ್ಕೆ ದೂರವಾಗಿದೆ. ನನ್ನ ವಿರುದ್ಧ ಸಿಎಂ ಸುಳ್ಳು ಆರೋಪ ಮಾಡಿದ್ದಾರೆ. ಅವರು ಬಿಡುಗಡೆ ಮಾಡಿರುವುದು ಫೇಕ್ ಆಡಿಯೋ. ನಾನು ಯಾರನ್ನೂ ಭೇಟಿ ಮಾಡಿಯೇ ಇಲ್ಲ. ಸಿಎಂ ಆರೋಪಗಳು ಸತ್ಯವಾದ್ರೆ ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ’ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.