ಸರ್ಕಾರ ನೀರು ಬಿಡಲ್ಲವೆಂದು ಗಟ್ಟಿಯಾಗಿ ನಿಂತ್ರೆ ನಾವೂ ಜೊತೆ ನಿಲ್ಲುತ್ತೇವೆ: ಬೊಮ್ಮಾಯಿ

ಬುಧವಾರ, 13 ಸೆಪ್ಟಂಬರ್ 2023 (09:50 IST)
ಬೆಂಗಳೂರು : ರಾಜ್ಯ ಸರ್ಕಾರ ತಮಿಳುನಾಡಿಗೆ ಯಾವುದೇ ಕಾರಣಕ್ಕೂ ಕಾವೇರಿ ನೀರು ಬಿಡುವುದಿಲ್ಲ ಎಂದು ಗಟ್ಟಿಯಾಗಿ ನಿಂತರೆ ನಾವೂ ಸರ್ಕಾರದ ಜೊತೆಗೆ ನಿಲ್ಲುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕಾವೇರಿ ನೀರು ನಿಯಂತ್ರಣಾ ಸಮಿತಿಯ ಪ್ರತಿ ದಿನ 5000 ಕ್ಯೂಸೆಕ್ನಂತೆ ತಮಿಳುನಾಡಿಗೆ ಮತ್ತೆ 15 ದಿನ ಕಾವೇರಿ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ಮಾಡಿರುವ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು,

ವಸ್ತು ಸ್ಥಿತಿ ನೋಡಿದರೆ, ಕಾವೇರಿಯಲ್ಲಿ ಕುಡಿಯಲಿಕ್ಕೂ ನೀರಿಲ್ಲ. ಮತ್ತೆ 7 ಟಿಎಂಸಿ ನೀರು ಬಿಡಲು ಹೇಳಿದ್ದಾರೆ. ಮಂಡ್ಯ ಜಿಲ್ಲೆ ಒಂದಕ್ಕೆ 32 ಟಿಎಂಸಿ ನೀರು ಬೇಕು. ಇದುವರೆಗೂ ಬಿಟ್ಟಿರುವುದು ಕೇವಲ 7 ಟಿಎಂಸಿ ಮಾತ್ರ. ಭತ್ತ ಕಬ್ಬು, ಮೆಕ್ಕೆಜೋಳ ಎಲ್ಲವೂ ಒಣಗುತ್ತಿದೆ ಎಂದರು.

ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಮೊದಲಿನಿಂದಲೂ ಎಡವುತ್ತಿದೆ. ನಾಳೆ ಕಾವೇರಿ ನೀರು ನಿರ್ವಹಣಾ ನ್ಯಾಯಮಂಡಳಿ ಸಭೆ ಇದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ