ಪಕ್ಷ ಮತ್ತೊಮ್ಮೆ ಸಚಿವ ಸ್ಥಾನ ನೀಡಿದರೆ ಉತ್ತಮವಾಗಿ ಕೆಲಸ ಮಾಡುವೆ - ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ್

ಶನಿವಾರ, 26 ಮೇ 2018 (14:06 IST)
ಬೆಂಗಳೂರು : ‘ಸಚಿವ ಸ್ಥಾನ ನೀಡಿದರೆ ಉತ್ತಮವಾಗಿ ಕೆಲಸ ಮಾಡುವೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ್ ಹೇಳಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಿವಾಸ ಕಾವೇರಿ ಬಳಿ ಹೇಳಿಕೆ ನೀಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ್ ಅವರು,’ಈ ಹಿಂದೆಯೂ ನಾನು ಸಚಿವನಾಗಿ ಕೆಲಸ ಮಾಡಿದ್ದೇನೆ. ನಾನೇನು ಸನ್ಯಾಸಿ ಅಲ್ಲ. ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲ್ಲ. ಪಕ್ಷದ ಜವಬ್ದಾರಿ ನೀಡಿದ್ದರಿಂದ ಸಚಿವ ಸ್ಥಾನ ತ್ಯಜಿಸಿದ್ದೆ. ಪಕ್ಷ ಮತ್ತೊಮ್ಮೆ ಸಚಿವ ಸ್ಥಾನ ನೀಡಿದರೆ ಉತ್ತಮ ಕೆಲಸ ನಿರ್ವಹಿಸುವೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ