ಹಾಲು ಉತ್ಪಾದಕರಿಗೆ ದರ ಹೆಚ್ಚಿಸದಿದ್ದಲ್ಲಿ ಹೋರಾಟ ಖಚಿತ-ನಿಶ್ಚಿತ-ಖಂಡಿತ

Sampriya

ಬುಧವಾರ, 4 ಸೆಪ್ಟಂಬರ್ 2024 (16:37 IST)
Photo Courtesy X
ಬೆಂಗಳೂರು: ಚುನಾವಣೆಗೂ ಮುನ್ನ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ ಹಾಲಿಗೆ ₹7 ಸಬ್ಸಿಡಿ ನೀಡುತ್ತೆವೆಂದು ಬೋಗಸ್‌ ಗ್ಯಾರಂಟಿ ನೀಡಿದ್ದ ಕಾಂಗ್ರೆಸ್ ಪಕ್ಷ ಇದೀಗ ಹಾಲಿನ ಖರೀದಿ ದರದಲ್ಲಿ 1.50ರೂ ಇಳಿಕೆ ಮಾಡಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಕೂಡಲೇ ಹಾಲು ಉತ್ಪಾದಕರಿಗೆ ದರ ಹೆಚ್ಚಿಸದಿದ್ದಲ್ಲಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈಗಾಗಲೇ ಹಾಲು ದರ ಇಳಿಕೆ ಸಂಬಂಧ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಆಕ್ರೋಶ ಹೊರಹಾಕಿದ್ದರು.  ಅಧಿಕಾರ ದರ್ಪದ ಅಮಲಿನಿಂದ ಕೊಬ್ಬಿರುವ ರಾಜ್ಯ ರಾಜ್ಯ ಕಾಂಗ್ರೆಸ್ ಸರಕಾರ ಅನ್ನದಾತನ ಮೇಲೆ ಬರೆಯ ಬರೆ ಎಳೆಯುತ್ತಿದೆ ಎಂದಿದ್ದರು.

ಇದೀಗ ಹಾಲಿನ ದರ ಇಳಿಕೆ ಸಂಬಂಧ ಬಿಜೆಪಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡು ಪ್ರತಿಭಟನೆಯ ಎಚ್ಚರಿಕೆ ನೀಡಿದೆ.

 ಹಾಲು ಉತ್ಪಾದಕರಿಗೆ ದ್ರೋಹ ಬಗೆಯುವುದೇ ಕಾಂಗ್ರೆಸ್‌ ಸರ್ಕಾರದ ಏಕೈಕ ಅಜೆಂಡಾ!!

ಚುನಾವಣೆಗೂ ಮುನ್ನ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ ಹಾಲಿಗೆ ₹7 ಸಬ್ಸಿಡಿ ನೀಡುತ್ತೆವೆಂದು ಬೋಗಸ್‌ ಗ್ಯಾರಂಟಿ ನೀಡಿತ್ತು.

ಆದರೆ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಇಲ್ಲಿಯವರೆಗೂ ಹಾಲು ಉತ್ಪಾದಕರಿಗೆ ನೀಡುವ ದರವನ್ನು ಗಣನೀಯವಾಗಿ ಕಡಿತಗೊಳಿಸುತ್ತಾ, ಈಗ ಮತ್ತೊಮ್ಮೆ ಪ್ರತಿ ಲೀಟರ್‌ ಮೇಲೆ ₹1.5 ಕಡಿತಗೊಳಿಸಿದೆ.

ಸಿಎಂ ಸಿದ್ದರಾಮಯ್ಯ ಅವರೆ, ಕೂಡಲೇ ಹಾಲು ಉತ್ಪಾದಕರಿಗೆ ದರ ಹೆಚ್ಚಿಸದಿದ್ದಲ್ಲಿ ಹೋರಾಟ ಖಚಿತ-ನಿಶ್ಚಿತ-ಖಂಡಿತ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ