ಕುಟುಂಬದಲ್ಲಿ ಕಡಿಮೆ ಮಕ್ಕಳಿದ್ದರೆ ಪ್ರಗತಿ, ಹೆಚ್ಚು ಮಕ್ಕಳಿದ್ರೆ ಖರ್ಚು : ಕೆ.ಸುಧಾಕರ್
ಮಂಗಳವಾರ, 12 ಜುಲೈ 2022 (07:08 IST)
ಬೆಂಗಳೂರು : ಕುಟುಂಬದಲ್ಲಿ ಹೆಚ್ಚು ಮಕ್ಕಳಿದ್ದರೆ ಖರ್ಚು ಹೆಚ್ಚಾಗುತ್ತದೆ. ಕಡಿಮೆ ಮಕ್ಕಳಿದ್ದರೆ ದೇಶ ಪ್ರಗತಿಯಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಡೆದ `ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 4 ಮಕ್ಕಳ ಬದಲು ಇಬ್ಬರಿದ್ದರೆ ಅವರಿಗೆ ಉತ್ತಮ ಶಿಕ್ಷಣ, ಆರೋಗ್ಯ ಸೌಲಭ್ಯ ನೀಡಬಹುದು. ನೈಸರ್ಗಿಕ ಸಂಪನ್ಮೂಲ ಹಿಂದೆ ಇದ್ದಷ್ಟೇ ಇರುತ್ತದೆ. ಹಾಗೆಯೇ ಭೌಗೋಳಿಕ ವಿಸ್ತೀರ್ಣ ಕೂಡ ಅಷ್ಟೇ ಇರುತ್ತದೆ ಎಂದು ಹೇಳಿದ್ದಾರೆ.
ಹಿಂದಿಗಿಂತ ದೇಶದ ಜನಸಂಖ್ಯೆ 6-7 ಪಟ್ಟು ಹೆಚ್ಚಿದ್ದರೂ, ಭೂಮಿ, ನೀರು ಮೊದಲಾದ ಸಂಪನ್ಮೂಲಗಳೇನೂ ಹೆಚ್ಚಾಗುವುದಿಲ್ಲ. ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭೂ ಕುಸಿತ, ಭಾರಿ ಮಳೆ ಸೇರಿದಂತೆ ವಿವಿಧ ಬಗೆಯ ಹವಾಮಾನ ವೈಪರೀತ್ಯ ಉಂಟಾಗುತ್ತಿದೆ. ಇದಕ್ಕೆ ಜನಸಂಖ್ಯೆ ಏರಿಕೆ ಕೂಡ ಕಾರಣ ಎಂದು ಹೇಳಿದ್ದಾರೆ.
ಹಿಂದೆ ಆರೋಗ್ಯ ಸೌಲಭ್ಯಗಳು ಕಡಿಮೆ ಇದ್ದಿದ್ದರಿಂದ ಆತಂಕ ಇತ್ತು. ಆದರೆ ಇಂದು ಆರೋಗ್ಯ ಸೌಲಭ್ಯಗಳು ಉತ್ತಮವಾಗಿದೆ. ಜೀವನ ಗುಣಮಟ್ಟ ಹೆಚ್ಚಿದೆ.