ಆಟೋದವರಿಗೆ ಸಮಸ್ಯೆಯಾದ್ರೆ ಸರ್ಕಾರ ಪರಿಹಾರ ನೀಡಲಿದೆ : ರಾಮಲಿಂಗಾರೆಡ್ಡಿ

ಬುಧವಾರ, 5 ಜುಲೈ 2023 (15:32 IST)
ಬೆಂಗಳೂರು : ಶಕ್ತಿ ಯೋಜನೆಯಿಂದ ಆಟೋ ಚಾಲಕರಿಗೆ ಸಮಸ್ಯೆಯಾದರೆ, ಸರ್ಕಾರ ಅವರ ನೆರವಿಗೆ ಧಾವಿಸೋ ಬಗ್ಗೆ ಸರ್ಕಾರ ನಿರ್ಧಾರ ಮಾಡಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
 
ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ನ ಭೋಜೇಗೌಡ ಪ್ರಶ್ನೆ ಕೇಳಿದರು. ಶಕ್ತಿ ಯೋಜನೆ ಪರಿಣಾಮ ಆಟೋ ರಿಕ್ಷಾಗಳ ಮೇಲೆ ಬಿದ್ದಿದೆ. ಉಚಿತ ಬಸ್ ಪ್ರಯಾಣದಿಂದ ಆಟೋದವರು ಜೀವನ ಮಾಡಲು ಆಗುತ್ತಿಲ್ಲ. ರಾಜ್ಯದಲ್ಲಿ ಸುಮಾರು 5 ಲಕ್ಷ ಆಟೋ ಚಾಲಕರು ಇದ್ದಾರೆ. ಅವರಿಗೆ ಜೀವನ ಮಾಡಲು ಆಗುತ್ತಿಲ್ಲ. ಇವರ ನೆರವಿಗೆ ಸರ್ಕಾರ ಬರಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಉತ್ತರ ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಜೂನ್ 11ಕ್ಕೆ ಶಕ್ತಿ ಯೋಜನೆ ಪ್ರಾರಂಭ ಆಯ್ತು. ಉತ್ತಮವಾಗಿ ಯೋಜನೆ ನಡೆಯುತ್ತಿದೆ. ಯೋಜನೆ ಜಾರಿ ಆಗಿ ಒಂದು ತಿಂಗಳು ಆಗಲಿ. ಆಟೋದವರಿಗೆ ಏನ್ ಸಮಸ್ಯೆ ಆಗಿದೆ ಅಂತ ನೋಡೋಣ ಎಂದು ಹೇಳಿದರು.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ