ಸ್ಯಾಂಟ್ರೊರವಿ ವ್ಯಕ್ತಿ ಆಮಿಷಕ್ಕೆ ಒಳಗಾಗುವಂಥ ಪ್ರಸಂಗ ಬಂದ್ರೆ ಸಾವನ್ನು ಬಯಸುತ್ತೇನೆ

ಸೋಮವಾರ, 16 ಜನವರಿ 2023 (15:06 IST)
ಸ್ವಚ್ಚ ರಾಜಕಾರಣದಲ್ಲಿ ಬದ್ಧತೆ ಹೊಂದಿರುವ ನಾನು, ಸಮಾಜ ಧ್ರೋಹಿಗಳೂ ಮತ್ತು ಪೀಡಕರಿಂದ ಅಕ್ರಮವಾಗಿ ಹಣ ಗಳಿಸಬೇಕಾದ ಸಂದರ್ಭ ಬಂದರೆ, ಬದುಕಲು ಇಚ್ಛಿಸುವುದಿಲ್ಲ, ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಹೇಳಿದ್ದಾರೆ.
 
ಸಚಿವರು ನಿನ್ನೆ ರಾತ್ರಿ  ಬೆಂಗಳೂರಿನ, ಮಲೆನಾಡು ಮಿತ್ರ ವೃಂದ ಆಯೋಜಿಸಿದ್ದ, ವಾರ್ಷಿಕ ಕ್ರೀಡಾಕೂಟ ದ, ಸಮಾರೋಪ ಸಮಾರಂಭ ವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
 
 ನನ್ನ ಗುಜರಾತ್ ಪ್ರವಾಸಕ್ಕೂ, ಸ್ಯಾಂಟ್ರೋ ರವಿ ಬಂಧನಕ್ಕೂ ಥಳುಕು ಹಾಕಿ ಮಾತನಾಡುತ್ತಿರುವ ಕೆಲವು ನಾಯಕರ ಬಗ್ಗೆ ಪ್ರಸ್ತಾಪಿಸಿದ ಸಚಿವರು, " ನನ್ನ ಗುಜರಾತ್ ಪ್ರವಾಸ ಬಹಳ ಹಿಂದೆಯೇ ನಿಗದಿಯಾಗಿತ್ತು. ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳ ನಿಯೋಗದ ನೇತೃತ್ವ ವಹಿಸಿದ್ದ ನನ್ನ ಗುಜರಾತ್ ಭೇಟಿ ಹಾಗೂ ಕಾರ್ಯಕ್ರಮಗಳು, ಪಾರದರ್ಶಕವಾಗಿವೆ" ಎಂದು ಹೇಳಿದ ಸಚಿವರು " ಒಂದು ವೇಳೆ ಸ್ಯಾನ್ ಟ್ರೋ ರವಿಯಂತಹ  ವ್ಯಕ್ತಿಗಳಿಂದ ಆಮಿಷಕ್ಕೆ ಒಳಗುವಂತಹ ಪರಿಸ್ಥಿತಿ ಬಂದರೆ, ಆತ್ಮಹತ್ಯೆ ದಾರಿ ತುಳಿಯುತ್ತೇನೆ" ಎಂದು ಭಾವುಕರಾಗಿ, ಸಚಿವರು, ನುಡಿದರು.
 
ಗುಜರಾತ್ ಪ್ರವಾಸದ ಸಂದರ್ಭದಲ್ಲಿ, ರಾಜ್ಯದಲ್ಲಿ ವಿಧಿ ವಿಜ್ಞಾನ ವಿಶ್ವ ವಿದ್ಯಾಲಯ ಸ್ಥಾಪನೆ ಕುರಿತು, ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವ ವಿದ್ಯಾಲಯ ದ, ಉಪ ಕುಲಪತಿಗಳು ಹಾಗೂ ಇತರ ಹಿರಿಯ ಅಧಿಕಾರಿಗಳ ಜತೆ, ಸಭೆ ನಡೆಸಿದ್ದೇನೆ. ಇದರ ಮುಂದುವರಿದ ಭಾಗವಾಗಿ, ಶೀಘ್ರದಲ್ಲಿಯೇ, ವಿಶ್ವ ವಿದ್ಯಾಲಯದ ಶಂಕು ಸ್ಥಾಪನ ಕಾರ್ಯಕ್ರಮವೂ, ನಡೆಯಲಿದೆ, ಎಂದ ಸಚಿವರು, 
 
ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೆಂಧ್ರ ಭಾಯಿ ಪಟೇಲ್ ಅವರನ್ನು ಸೌಜನ್ಯ ಭೇಟಿ ನಡೆಸಿದ್ದೇನೆ. ಎಲ್ಲವೂ ತೆರದ ಪುಸ್ತಕದಂತೆ ಇದೆ, ಎಂದರು.ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದ ವ್ಯಕ್ತಿಯೊಬ್ಬರು, ಜವಾಬ್ದಾರಿಯುತವಾಗಿ ವರ್ತಿಸಬೇಕು, ಎಂದು ಸಚಿವರು,  ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ