ಯತ್ನಾಳ್‌ಗೆ ಪಾಕಿಸ್ತಾನದ ಮೇಲೆ ಪ್ರೀತಿಯಿದ್ದರೆ ಅಲ್ಲಿಗೇ ಹೋಗಲಿ: ದಿನೇಶ್ ಗುಂಡೂರಾವ್ ತಿರುಗೇಟು

Sampriya

ಶನಿವಾರ, 6 ಏಪ್ರಿಲ್ 2024 (22:39 IST)
ಬೆಂಗಳೂರು: ಬಸನಗೌಡ ಪಾಟೀಲ ಯತ್ನಾಳ್ ಒಬ್ಬ ಹುಚ್ಚು ಶಾಸಕ ಎಂದು ಸಚಿವ ದಿನೇಶ್ ಗುಂಡೂರಾವ್ ಅವರು ಹರಿಹಾಯ್ದಿದ್ದಾರೆ.

ಸಚಿವ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ. ದೇಶ ವಿರೋಧಿ ಹೇಳಿಕೆ ನೀಡುವುದು ಅವರಿಗೆ ಚಟವಾಗಿದೆ ಎಂದು ಬಸನಗೌಡ ಪಾಟೀಲ ಯತ್ನಾಳ್ ಅವರು ಹೇಳಿಕೆಗೆ ಗುಂಡೂರಾವ್ ಅವರು ಎಕ್ಸ್‌ನಲ್ಲಿ ತಿರುಗೇಟು ನೀಡಿದ್ದಾರೆ.

‘ಮತಾಂಧತೆಯಲ್ಲಿ ಬಿದ್ದು ಹೊರಳಾಡುತ್ತಿರುವ ಯತ್ನಾಳ್‌ ಮಾತೆತ್ತಿದರೆ ಪಾಕಿಸ್ತಾನ, ಪಾಕಿಸ್ತಾನ ಎನ್ನುತ್ತಾರೆ. ಅವರಿಗೆ ಪಾಕಿಸ್ತಾನದ ಮೇಲೆ ಅಷ್ಟೊಂದು ಪ್ರೀತಿಯಿದ್ದರೆ ಅಲ್ಲಿಗೇ ಹೋಗಲಿ' ಎಂದಿದ್ದಾರೆ.

'ಬಿಜೆಪಿ ಭೀಷ್ಮ ಅಡ್ವಾಣಿಯವರ ಮೂಲವೇ ಪಾಕಿಸ್ತಾನ. ಆಮಂತ್ರಣವೇ ಇಲ್ಲದೇ ಪಕ್ಕದ ಮನೆಗೆ ಹೋಗುವಂತೆ ವೈರಿ ದೇಶಕ್ಕೆ ಹೋಗಿ ಬಂದವರು ಮೋದಿ. ತಲೆಯಲ್ಲಿ ಮೆದುಳೇ ಇಲ್ಲದಂತೆ ಮಾತನಾಡುವ, ಅರೆ ಹುಚ್ಚನಂತಾಗಿರುವ ಯತ್ನಾಳ್‌ರಿಂದ ಪಾಠ ಕಲಿಯುವ ಕರ್ಮ ನನಗಿನ್ನೂ ಬಂದಿಲ್ಲ' ಎಂದು ಕಿಡಿಕಾರಿದ್ದಾರೆ.

ಭಾರತೀಯ ಭ್ರಷ್ಟರ ಪಾರ್ಟಿಯಲ್ಲಿ ಯತ್ನಾಳ್‌ ಎಂಬ ಹುಚ್ಚು ಶಾಸಕ ಬಾಯಿಗೆ ಬಂದಂತೆ ಮಾತನಾಡುತ್ತಲೇ ಇರುತ್ತಾರೆ. ನನ್ನ ದೇಶ ಸರ್ವಜನಾಂಗದ ಶಾಂತಿಯ ತೋಟ. ಇಲ್ಲಿ ಎಲ್ಲಾ ಧರ್ಮದವರೂ ಒಂದಾಗಿ ಬಾಳುತ್ತಿದ್ದೇವೆ. ಯತ್ನಾಳ್‌ರಂತೆ ಮನೆ ಒಡೆಯೋ ಕೆಲಸ, ಕೀಳು ಭಾಷೆ ಬಳಕೆಯನ್ನು ನಾವು ಮಾಡಲ್ಲ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ