ಯೋಗೇಶ್ವರ್‌ಗೆ ಮಾನ ಮರ್ಯಾದೆ ಇದ್ದರೆ ಭಗೀರಥನೆಂದು ಹೇಳಿಕೊಳ್ಳದೆ ಚುನಾವಣೆ ಎದುರಿಸಲಿ: ಡಿವಿಎಸ್
ಆರನೇ ಸಲ ಪಕ್ಷಾಂತರ ಮಾಡಿ ಈಗ ಕಾಂಗ್ರೆಸ್ ಸೇರಿರುವ ಯೋಗೇಶ್ವರ್ ನಡೆ, ರಾಜಕೀಯ ಪಕ್ಷಗಳು ಒಬ್ಬ ವ್ಯಕ್ತಿಯನ್ನು ಎಷ್ಟರಮಟ್ಟಿಗೆ ಇಡಬೇಕು ಎಂಬುದು ದೊಡ್ಡ ಪಾಠ. ನಾವು ಈ ಭಾಗದಲ್ಲಿ ಅವರ ಮೇಲೆ ಅವಲಂಬಿನೆ ಆಗಿದ್ದು ನಿಜ. ಈಗ ಅವರು ಮಾಡಿರುವ ದ್ರೋಹಕ್ಕೆ ಈ ಚುನಾವಣೆಯಲ್ಲಿ ಪಾಠ ಕಲಿಸಬೇಕು ಎಂದರು.
ಈ ಉಪ ಚುನಾವಣೆ ನಮಗೆ ದೊಡ್ಡ ಸವಾಲು. ಇಲ್ಲಿ ವ್ಯಕ್ತಿಯೇ ಪಕ್ಷ ಎಂದು ಬಿಂಬಿಸಿಕೊಂಡು ಪ್ರತಿ ಸಲ ಸ್ಚಾರ್ಥಕ್ಕಾಗಿ ಪಕ್ಷಾಂತರ ಮಾಡಿದ ಯೋಗೇಶ್ವರ್ ರಾಜಕಾರಣದಲ್ಲಿ ಇರಬೇಕೊ ಬೇಡವೊ ಎಂದು ನಿರ್ಧರಿಸುವ ಚುನಾವಣೆ ಇದಾಗಿದೆ ಎಂದರು.