ಮಾಂಸ ತಿಂದು ದೇವಸ್ಥಾನಕ್ಕೆ ಹೋದರೆ ತಪ್ಪೇನು– ಕುಮಾರಸ್ವಾಮಿ

ಮಂಗಳವಾರ, 13 ಫೆಬ್ರವರಿ 2018 (15:38 IST)
ಮಾಂಸಾಹಾರ ಸೇವನೆ ಮಾಡಿ ದೇವಸ್ಥಾನಕ್ಕೆ ಹೋಗುವುದರಲ್ಲಿ ತಪ್ಪೇನಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. 
 
ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಜನಾಶೀರ್ವಾದ ಯಾತ್ರೆ ವೇಳೆ ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಹೋಗಿದ್ದಾರೆ ಎಂಬ ಬಿಎಸ್‍ವೈ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿದ ಅವರು, ಕೆಲವು ದೇವರಿಗೆ ಮಾಂಸಾಹಾರವೇ ಪ್ರಿಯ. ಆದ್ದರಿಂದ ಮನಸ್ಸು ಶುದ್ಧವಿಲ್ಲದೆ ದೇವಸ್ಥಾನಕ್ಕೆ ಹೋಗಿ ಏನು ಪ್ರಯೋಜನ ಎಂದಿದ್ದಾರೆ.
 
ಇದಕ್ಕೆ ನಾನು ಪ್ರಾಮುಖ್ಯತೆ ನೀಡುವುದಿಲ್ಲ. ನಮ್ಮ ದೇಹವೇ ಒಂದು ಮಾಂಸದ ಮುದ್ದೆ. ಹಾಗಾಗಿ ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಹೋದರೆ ತಪ್ಪೇನು ಎಂದು ಕೇಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ