ಬಿಜೆಪಿಯಲ್ಲಿ ಟಿಕೆಟ್ ಕೊಟ್ಟರೆ ನಿಂತ್ಕೊತೀನಿ, ಇಲ್ಲ ಅಂದ್ರೆ ಇಲ್ಲ- ಸಚಿವ ಸೋಮಣ್ಣ

ಸೋಮವಾರ, 13 ಮಾರ್ಚ್ 2023 (15:51 IST)
ವಿಧಾನಸೌಧದಲ್ಲಿ ಟಿಕೇಟ್ ವಿಚಾರವಾಗಿ ಸಚಿವ ವಿ‌.ಸೋಮಣ್ಣ ಪ್ರತಿಕ್ರಿಯಿಸಿದ್ದು,ರಾಜಕಾರಣದಲ್ಲಿ ಇವೆಲ್ಲ ಇರುತ್ತೆ.ಏನು ಹೇಳಬೇಕು‌,ಎಲ್ಲಿ ಹೇಳಬೇಕು ಹೇಳಿದ್ದೀನಿ.ಕವಲುದಾರಿಗಳು ಇರುತ್ವೆ, ನಾನೇನೂ ಸನ್ಯಾಸಿ ಇಲ್ಲ.ಬಿಜೆಪಿಯಲ್ಲಿ ಟಿಕೆಟ್ ಕೊಟ್ಟರೆ ನಿಂತ್ಕೊತೀನಿ, ಇಲ್ಲ ಅಂದ್ರೆ ಇಲ್ಲ.ನಾನು ಯಾವತ್ತಾದ್ರೂ ನನ್ನ ಮಗನಿಗೆ ಟಿಕೆಟ್ ಕೇಳಿದ್ದೀನಾ..?ಡಿಕೆಶಿ, ಸಿದ್ದರಾಮಯ್ಯ ನಾವೆಲ್ಲ ಸ್ನೇಹಿತರು .ನಾವು ಒಟ್ಟಿಗೆ ಕೆಲಸ ಮಾಡಿದ್ದೀವಿ .ಅವರ ಕೆಲಸ ಅವರು ಮಾಡ್ತಾರೆ, ನನ್ನ ಕೆಲಸ ನಾನು ಮಾಡ್ತೀನಿ.ನನಗೆ ಅಸಮಾಧಾನ ಇದೆ ಅಂತಾ ನಾನು ಹೇಳಿಲ್ಲ ಎಂದು ಸಚಿವ ವಿ ಸೋಮಣ್ಣ ಹೇಳಿದ್ರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ