ತಾಕತ್ತಿದ್ರೆ ರೈತರ ಸಾಲ ಮನ್ನಾ ಮಾಡಿ: ಕುಮಾರಸ್ವಾಮಿ

ಶುಕ್ರವಾರ, 16 ಜೂನ್ 2017 (13:14 IST)
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರಕ್ಕೆ ತಾಕತ್ತಿದ್ರೆ ರೈತರ ಸಾಲ ಮನ್ನಾ ಮಾಡಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸವಾಲ್ ಹಾಕಿದ್ದಾರೆ.
 
ವಿಧಾನಸಭೆಯ ಅಧಿವೇಶನದಲ್ಲಿ ಮಾತನಾಡಿದ ಅವರು, ಒಂದು ಕಡೆ ಬರಗಾಲ ಮತ್ತೊಂದೆಡೆ ಸಾಲದ ಬಾಧೆಯಿಂದಾಗಿ ರೈತರು ಸಂಕಷ್ಟದ ಸ್ಥಿತಿಯಲ್ಲಿದ್ದಾರೆ. ರೈತರ ಸಮಸ್ಯೆಗಳು ಪರಿಹಾರವಾಗುವುದು ಯಾವಾಗ ಎಂದು ಪ್ರಶ್ನಿಸಿದರು. 
 
ರಾಜ್ಯದಲ್ಲಿ 3000 ರೈತರು ಸಾವನ್ನಪ್ಪಿದ್ದಾರೆ. ಕೇಂದ್ರ ಸರಕಾರ ರಾಜ್ಯದ ರೈತರ ಬಗ್ಗೆ ಗಮನ ಹರಿಸುತ್ತಿಲ್ಲ.ರಾಜ್ಯ ಸರಕಾರವಾದರೂ ರೈತರ ನೆರವಿಗೆ ಬರಬೇಕು ಎಂದು ಮನವಿ ಮಾಡಿದ್ದಾರೆ.
 
ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಕೇವಲ 24 ಗಂಟೆಯೊಳಗೆ ರೈತರ ಸಂಪೂರ್ಣ ಸಾಲ ಮಾಡುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ. 
 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ