ನನ್ನನ್ನು ಬೆಂಬಲಿಸಿದರೆ ಬಿಜೆಪಿಯನ್ನೂ ಬೆಂಬಲಿಸಿದಂತೆ : ಬೊಮ್ಮಾಯಿ

ಬುಧವಾರ, 5 ಏಪ್ರಿಲ್ 2023 (15:17 IST)
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗಾಗಿ ನಾನು ಚುನಾವಣೆಯಲ್ಲಿ ಬೆಂಬಲಿಸಲು ಬಂದಿದ್ದೇನೆ. ಚಿಕ್ಕಂದಿನಿಂದಲೂ ನನಗೆ ಅವರು ಪರಿಚಯ. ನನ್ನ ಕಷ್ಟ ಕಾಲದಲ್ಲಿ ಅವರು ನನ್ನೊಂದಿಗೆ ನಿಂತಿದ್ದಾರೆ.

ಬೆಂಬಲ ಸೂಚಿಸುತ್ತಿದ್ದೇನೆ  ಎಂದು ನಟ ಕಿಚ್ಚ ಸುದೀಪ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಆದರೆ, ಬಿಜೆಪಿಯನ್ನು ಬೆಂಬಲಿಸುತ್ತೇನೆ ಎಂದು ಅವರು ಅಪ್ಪಿತಪ್ಪಿಯೂ ಹೇಳಿಲ್ಲ. ಹಾಗಾಗಿ ಮಾಧ್ಯಮದವರು ಬಿಜೆಪಿಯನ್ನು ಬೆಂಬಲಿಸುತ್ತಿಲ್ಲವಾ? ಎಂದು ಪ್ರಶ್ನೆ ಮಾಡಿದರು.

ಬಿಜೆಪಿ ಜೊತೆಗಿನ ಸಂಬಂಧವನ್ನು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  ‘ಈ ಸಂದರ್ಭದಲ್ಲಿ ಒಂದು ಸ್ಪಷ್ಟನೆ ನೀಡುತ್ತೇನೆ. ಯಾವುದೇ ಕಾರಣಕ್ಕೂ ನಾನು ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಇದನ್ನು ಅಭಿಮಾನಿಗಳಿಗೆ ಸ್ಪಷ್ಟನೆ ನೀಡುತ್ತೇನೆ. ಯಾವುದೇ ಕಾರಣಕ್ಕೂ ಟಿಕೆಟ್ ಕೇಳುವುದಿಲ್ಲ’ ಎಂದಿದ್ದಾರೆ ಸುದೀಪ್.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ