ಕಾನೂನು ಬಾಹಿರ ಸಿಮೆಂಟ್ ಕಾರ್ಖಾನೆ ಸ್ಥಾಪನೆ?

ಗುರುವಾರ, 7 ಫೆಬ್ರವರಿ 2019 (19:57 IST)
ಕಾನೂನು ಬಾಹಿರವಾಗಿ ಸಿಮೆಂಟ್ ಕಾರ್ಖಾನೆ ಸ್ಥಾಪನೆ ಮಾಡಲಾಗಿದೆ ಎಂದು ಮಾಜಿ ಸಚಿವರೊಬ್ಬರು ಆರೋಪ ಮಾಡಿದ್ದಾರೆ.

ಕಲಬುರ್ಗಿ ಜಿಲ್ಲೆ ಸೇಡಂ ತಾಲೂಕಿನ ಕೋಡ್ಲಾ ಗ್ರಾಮದ ವ್ಯಾಪ್ತಿಯಲ್ಲಿ ಕಾನೂನು ಬಾಹಿರವಾಗಿ ಸಿಮೆಂಟ್ ಕಾರ್ಖಾನೆ ಸ್ಥಾಪನೆ ಮಾಡಲಾಗಿದೆ ಎಂದು ಮಾಜಿ ಸಚಿವ ಎಸ್.ಕೆ.ಕಾಂತಾ ಆರೋಪಿಸಿದ್ದಾರೆ.

ಕಲಬುರ್ಗಿಯಲ್ಲಿ ಮಾತನಾಡಿದ ಅವರು, ಜಮೀನು ಪರಿವರ್ತನೆ ಮಾಡಿಕೊಳ್ಳದೆಯೇ ಶ್ರೀ ಸಿಮೆಂಟ್ ಕಾರ್ಖಾನೆ ಸ್ಥಾಪನೆ ಮಾಡಲಾಗಿದೆ. 400 ಎಕರೆ ವ್ಯಾಪ್ತಿಯಲ್ಲಿ ಕಾರ್ಖಾನೆ ನಿರ್ಮಿಸಲಾಗಿದೆ. ಜಿಲ್ಲಾಧಿಕಾರಿಗಳು ಕೃಷಿಯೇತರ ಎಂದು ಜಮೀನು ಪರಿವರ್ತನೆ  ಮಾಡದಿದ್ದರೂ ಕಾರ್ಖಾನೆ ಹೇಗೆ ಅಸ್ತಿತ್ವಕ್ಕೆ ಹೇಗೆ ಬಂದಿದೆ ಎಂದು ಕಾಂತಾ ಪ್ರಶ್ನಿಸಿದ್ದಾರೆ. ಸಿಮೆಂಟ್ ಕಾರ್ಖಾನೆ ಅಸ್ತಿತ್ವಕ್ಕೆ ಬರುವಲ್ಲಿ ಹಲವು ಐಎಎಸ್ ಅಧಿಕಾರಿಗಳು, ಜನಪ್ರತಿನಿಧಿಗಳು ಶಾಮೀಲಾಗಿದ್ದಾರೆ. ಮೀಸಲು ಅರಣ್ಯ ಪ್ರದೇಶದ 320 ಎಕರೆಯನ್ನೂ ಕಾರ್ಖಾನೆಗೆ ನೀಡಿ ಕಾನೂನು ಉಲ್ಲಂಘನೆ ಮಾಡಲಾಗಿದೆ ಎಂದು ಕಾಂತಾ ಕಿಡಿಕಾರಿದ್ದಾರೆ.

ಕಾನೂನು ಉಲ್ಲಂಘಿಸಿ ಅಸ್ತಿತ್ವಕ್ಕೆ ಬಂದ ಕಾರ್ಖಾನೆ ವಿರುದ್ಧ ಕ್ರಮ ಕೈಗೊಳ್ಳಬೇಕು. ಜೊತೆಗೆ ಕಾರ್ಖಾನೆಯ ಅಕ್ರಮಕ್ಕೆ ಸಹಕರಿಸಿದ ಅಧಿಕಾರಗಳ ಮೇಲೂ ಮೇಲೂ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ