ಅಕ್ರಮ ಸಂಗ್ರಹ : ಮಾಜಿ ಸಂಸದರ ವಿರುದ್ಧ ಕೇಸ್

ಶುಕ್ರವಾರ, 8 ನವೆಂಬರ್ 2019 (13:10 IST)
ಮಾಜಿ ಸಂಸದರೊಬ್ಬರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನಿರ್ಮಾಣ ಕಾಮಗಾರಿಗೆ ಬಳಸಬೇಕಾದ ಪೈಪುಗಳನ್ನು ಅಕ್ರಮವಾಗಿ ಸಂಗ್ರಹಿಸಿದ ಹಿನ್ನೆಲೆಯಲ್ಲಿ ಚಿತ್ರದುರ್ಗ ಮಾಜಿ ಸಂಸದರಾದ ಚಂದ್ರಪ್ಪ ಅವರ ಮೇಲೆ ಆರೋಪ ಕೇಳಿ ಬಂದಿದೆ.

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಸ್ವಗ್ರಾಮದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಮಾಜಿ ಸಂಸದ ಸೇರಿದಂತೆ ಕುಟುಂಬದ ಇತರೆ ಸದಸ್ಯರ ಮನೆ, ತೋಟದ ಮನೆ ಮತ್ತು ಸಮುದಾಯ ಭವನದಲ್ಲಿ ಅಕ್ರಮವಾಗಿ ಪೈಪುಗಳನ್ನು ಸಂಗ್ರಹ ಮಾಡಿದ್ದಾರೆ ಎಂದು ದೂರಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂ.ಸೀತಾರಾಮು ಎಂಬುವವರು ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ದೂರಿನನ್ವಯ ಲಕ್ಕವಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ