ಅಕ್ರಮ ಮರಳುಗಾರಿಕೆ: ಎಂಜಿನಿಯರ್‌ಗಳಿಗೆ ನೋಟಿಸ್ ಜಾರಿ

ಶನಿವಾರ, 24 ಜನವರಿ 2015 (09:40 IST)
ತಾಲೂಕಿನ ಹಗರಿ ನದಿಯ ವಣೇನೂರು ತೀರದಲ್ಲಿ ನಿಯಮ ಉಲ್ಲಂಘಿಸಿ ಎತೇಚ್ಚವಾಗಿ  ಮರಳು ತೆಗೆಯುವ ಮೂಲಕ ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸಮೀರ್ ಶುಕ್ಲಾ ಲೋಖೋಪಯೋಗಿ ಇಲಾಖೆಗೆ ಸಂಪೂರ್ಣ ವರದಿ ಸಲ್ಲಿಸುವಂತೆ ಆದೇಶಿಸಿದ್ದಾರೆ. 
 
ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಬಗ್ಗೆ ಜಿಲ್ಲಾ ದಂಢಾಧಿಕಾರಿಗಳು ಸಂಪೂರ್ಣ ವರದಿಯನ್ನು ಸಿದ್ದಪಡಿಸಿ ಜಿಲ್ಲಾಧಿಕಾರಿಗಳಿಗೆ ನೀಡಿದ್ದರು ಎನ್ನಲಾಗಿದ್ದು, ವರದಿಯನ್ನು ಜಿಲ್ಲಾಧಿಕಾರಿಗಳು ಸಂಪೂರ್ಣವಾಗಿ ಪರಿಶೀಲಿಸಿದ್ದಾರೆ. ಬಳಿಕ ಅಕ್ರಮ ನಡೆದಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಲೋಖೋಪಯೋಗಿ ಇಲಾಖೆಯ ಎಂಜಿನಿಯರ್‌ಗಳಿಗೆ ನೋಟಿಸ್ ಜಾರಿಗೊಳಿಸಿದ್ದಾರೆ. 
 
ಪ್ರಕರಣ ಸಂಬಂಧ ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿಗಳು, ಇಲ್ಲಿ ಮರಳು ತೆಗೆಯುತ್ತಿದ್ದ ಗುತ್ತಿಗೆದಾರರು ಪರವಾನಿಗೆಯನ್ನು ಪಡೆದಿದ್ದರು. ಆದರೆ ನಿಗಧಿಪಡಿಸಿದ ನಿಯಮಕ್ಕಿಂತ ಹೆಚ್ಚು ಮರಳನನ್ನು ತೆಗೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಪೂರ್ಣ ವರದಿ ಸಲ್ಲಿಸುವಂತೆ ಲೋಖೋಪಯೋಗಿ ಇಲಾಖೆಯ ಎಂಜಿನಿಯರ್‌ಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ ಎಂದರು. 
 
ಮೂಲಗಳ ಪ್ರಕಾರ, ಈಗಾಗಲೇ ಜಿಲ್ಲಾಧಿಕಾರಿಗಳ ನೋಟಿಸ್‌ಗೆ ಎಂಜಿನಿಯರ್‌ಗಳು ಉತ್ತರಿಸಿದ್ದು, ಯಾವುದೇ ಅಕ್ರಮ ನಡೆದಿಲ್ಲ ಎಂಬುದಾಗಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.  

ವೆಬ್ದುನಿಯಾವನ್ನು ಓದಿ