ಅಕ್ರಮ ಡಿನೋಟಿಫಿಕೇಷನ್: ಯಡಿಯೂರಪ್ಪ ವಿರುದ್ಧ ಮತ್ತೆ ದೂರು ದಾಖಲು

ಗುರುವಾರ, 6 ಅಕ್ಟೋಬರ್ 2016 (17:48 IST)
ಅಕ್ರಮ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಮತ್ತೆ ಖಾಸಗಿ ದೂರು ದಾಖಲಾಗಿದೆ.
 
ಬಿ.ಎಸ್.ಯಡಿಯೂರಪ್ಪ ಕಾನೂನು ಬಾಹಿರ ಡಿನೋಟಿಫಿಕೇಶನ್ ಮಾಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಸಿರಾಜಿನ್ ಬಾಷಾ ಅವರು ಖಾಸಗಿ ದೂರು ದಾಖಲಿಸಿದ್ದಾರೆ. 
 
ಯಡಿಯೂರಪ್ಪ ವಿರುದ್ಧ ಈ ಹಿಂದೆ ದಾಖಲಾಗಿದ್ದ 5 ಪ್ರಕರಣಗಳನ್ನು ಹೈಕೋರ್ಟ್ ರದ್ದುಪಡಿಸಿತ್ತು. ಅಂದಿನ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ಪೂರ್ವಾನುಮತಿ ನೀಡಿದ್ದರಿಂದ ಯಡಿಯೂರಪ್ಪ ವಿರುದ್ಧದ 5 ಪ್ರಕರಣಗಳನ್ನು ರದ್ದುಪಡಿಸಿತ್ತು. 
 
ಈಗ ಬಿ.ಎಸ್.ಯಡಿಯೂರಪ್ಪನವರು ಮಾಜಿ ಮುಖ್ಯಮಂತ್ರಿಯಾಗಿರುವುದರಿಂದ ಯಾವುದೇ ಅನುಮತಿಯ ಅಗತ್ಯವಿಲ್ಲ ಎಂದು ರಾಜ್ಯಪಾಲ ವಜುಭಾಯ್ ವಾಲಾ ಸೂಚನೆ ನೀಡಿದ್ದರ ಹಿನ್ನೆಲೆಯಲ್ಲಿ ಸಿರಾಜಿನ್ ಬಾಷಾ ಅವರು 5 ಕೇಸ್‌ಗಳನ್ನು ರದ್ದುಪಡಿಸಿರುವದನ್ನು ಪ್ರಶ್ನಿಸಿ ಹೈಕೋರ್ಟ್‌ ಮೇಲ್ಮನವಿ ಸಲ್ಲಿಸಿದರು. 
 
ಈ ಅರ್ಜಿ ವಿಚಾರಣೆಯನ್ನು ಕೋರ್ಟ್ ಅಕ್ಟೋಬರ್ 27ಕ್ಕೆ ನಿಗದಿಪಡಿಸಿದೆ. ಏತನ್ಮಧ್ಯ ರಾಜ್ಯಪಾಲರ ಅನುಮತಿ ಅಗತ್ಯ ಇಲ್ಲದ ಹಿನ್ನೆಲೆಯಲ್ಲಿ ಲೋಕಾಯುಕ್ತ ವಿಶೇಷ ನ್ಯಾಯಲಯದಲ್ಲಿ ಯಡಿಯೂರಪ್ಪ ವಿರುದ್ಧ ದೂರು ಸಲ್ಲಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ