ಐಎಂಎ ಬಹುಕೋಟಿ ವಂಚನೆ ಪ್ರಕರಣ; ರೋಷನ್ ಬೇಗ್ ಮನೆ ಮೇಲೆ ಸಿಬಿಐ ದಾಳಿ

ಸೋಮವಾರ, 23 ನವೆಂಬರ್ 2020 (13:26 IST)
ಬೆಂಗಳೂರು : ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರೋಷನ್ ಬೇಗ್ ಮನೆ ಮೇಲೆ ಸಿಬಿಐ ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಪಿಲಿಕೇಶೊ ನಗರದ ಕೋಲ್ಸ್ ಪಾರ್ಕ್ ನಿವಾಸದ ಮೇಲೆ ದಾಳಿ ನಡೆಸಿದ ಸಿಬಿಐ, ಈ ವೇಳೆ ರೋಷನ್ ಬೇಗ್ ಪತ್ನಿ ಹಾಗೂ ಮಗನನ್ನು ಸಿಬಿಐ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬೇಗ್ ಹಣದ ವ್ಯವಹಾರಗಳ ಬಗ್ಗೆ ವಿಚಾರಣೆ  ನಡೆಸುತ್ತಿದ್ದಾರೆ ಎನ್ನಲಾಗಿದೆ. ಹಾಗೇ ಸಿಬಿಐ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಸದ್ಯ ಐಎಂಎ ಕೇಸ್ ನಲ್ಲಿ ಬಂಧನಕ್ಕೊಳಗಾದ ರೋಷನ್ ಬೇಗ್ ಪರಪ್ಪನ ಅಗ್ರಹಾರ ಸೆಂಟ್ರಲ್  ಜೈಲಿನಲ್ಲಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ