ಬೆಂಗಳೂರು: ಕಳೆದ ಕೆಲ ದಿನಗಳಿಂದ ದೇಶದ ಹಲವೆಡೆ ವಿಪರೀತ ಚಳಿಯ ಚಳಿಯ ವಾತಾವರಣವಿದ್ದು, ಇದೀಗ ಹವಾಮಾನ ಇಲಾಖೆ ಪ್ರಕಾರ ಈ ತಿಂಗಳ ಕೊನೆಯಲ್ಲಿ ದೇಶದ ಕೆಲವೆಡೆ ಭಾರೀ ಮಳೆಯಾಗಲಿದೆ. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಚಂಡಮಾರುತದ ಪರಿಣಾಮ ದೇಶದ ಹಲವು ಭಾಗಗಳಲ್ಲಿ ಭೀಕರ ಚಳಿ ನಡುವೆಯೂ ಮಳೆಯಾಗುವ ಸಾಧ್ಯತೆಯಿದೆ.
ಜನವರಿ 29 ಮತ್ತು 30ರಂದು ಪಶ್ಚಿಮ ಹಿಮಾಲಯ ಪ್ರದೇಶದ ಅಲ್ಲಲ್ಲಿ ಪ್ರತ್ಯೇಕವಾಗಿ ದಟ್ಟ ಮಂಜಿನ ನಡುವೆಯೇ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಇದೇ ವೇಳೆ ಒಡಿಶಾ, ಅಸ್ಸಾಂ, ಮೇಘಾಲಯದ ಪ್ರತ್ಯೇಕ ಭಾಗಗಳಲ್ಲಿ, ಉತ್ತರಾಖಂಡ, ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ, ತ್ರಿಪುರದ ಪ್ರತ್ಯೇಕ ಭಾಗಗಳಲ್ಲಿ ಭೀಕರ ಚಳಿ ನಡುವೆ ಮಳೆಯಾಗುವ ಸಾಧ್ಯತೆಯಿದೆ.
ಅದಲ್ಲದೆ ಹವಾಮಾನ ಇಲಾಖೆ ಮುನ್ಸುಚನೆ ಪ್ರಕಾರ ಹಿಮಾಚಲ ಪ್ರದೇಶ ಮತ್ತು ಪಂಜಾಬ್‌ನ ಪ್ರತ್ಯೇಕ ಭಾಗಗಳಲ್ಲಿ ಇದೇ ರೀತಿಯ ವಾತಾವರಣವಿರಲಿದೆ.
ಇನ್ನು ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಜನವರಿ 26ರಿಂದ 28ರವರೆಗೆ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನ ಪ್ರತ್ಯೇಕ ಭಾಗಗಳಲ್ಲಿ ದಟ್ಟ ಮಂಜು ಕವಿದ ವಾತಾವರಣ ಇರಲಿದೆ. ಜನವರಿ 26 & 27ರಂದು ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲೂ ಇದೇ ರೀತಿಯ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.