5 ಗ್ಯಾರಂಟಿ ಜಾರಿಗೆ 59 ಸಾವಿರ ಕೋಟಿ ವೆಚ್ಚವಾಗುತ್ತೆ : ಸಿದ್ದರಾಮಯ್ಯ

ಶುಕ್ರವಾರ, 9 ಜೂನ್ 2023 (08:24 IST)
ಬೆಂಗಳೂರು : 5 ಗ್ಯಾರಂಟಿಗಳನ್ನು ಜಾರಿಗೊಳಿಸಲು ಸುಮಾರು 59,000 ಕೋಟಿ ರೂ. ವಾರ್ಷಿಕ ವೆಚ್ಚವಾಗಲಿದೆ. ನಾಡಿನ ಎಲ್ಲಾ ವರ್ಗಗಳ ಜನರ ಕಲ್ಯಾಣ ನಮಗೆ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

5 ಗ್ಯಾರಂಟಿ ಯೋಜನೆಗಳಿಗೆ ಎಷ್ಟು ಖರ್ಚಾಗಲಿದೆ? ಈ ಯೋಜನೆ ಜಾರಿಗೆ ಹಣ ಎಲ್ಲಿಂದ ತರುತ್ತೀರಿ ಎಂದು ಮಾಧ್ಯಮಗಳು ಈ ಹಿಂದೆ ಹಲವು ಬಾರಿ ಸರ್ಕಾರವನ್ನು ಪ್ರಶ್ನಿಸಿದ್ದವು. ಆದರೆ ಇಂದು ಸಿದ್ದರಾಮಯ್ಯ ಈ ಯೋಜನೆಗೆ ಅಂದಾಜು ವೆಚ್ಚವನ್ನು ತಿಳಿಸಿದ್ದಾರೆ. ಆದರೆ ಇಷ್ಟೊಂದು ಹಣವನ್ನು ಹೇಗೆ ಹೊಂದಾಣಿಕೆ ಮಾಡಲಾಗುತ್ತದೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ.

ಹಲವು ಶತಮಾನಗಳಿಂದ ಅವಕಾಶ ವಂಚಿತರಾದವರಿಗೆ ಈಗ ಅವಕಾಶ ಒದಗಿಸುವ ಮೂಲಕ ಅಸಮಾನತೆಯನ್ನು ನಿವಾರಿಸಿ ಸಮಾನತೆಯನ್ನು ಕಲ್ಪಿಸಬೇಕಾಗಿದೆ. ಈ ನಿಟ್ಟಿನಲ್ಲಿ ಹಿಂದೆ ನಮ್ಮ ಸರ್ಕಾರ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು 162 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಂಡಿತ್ತು.

ಸಮೀಕ್ಷೆಯ ವರದಿಯನ್ನು ಸ್ವೀಕರಿಸಲು ಹಿಂದಿನ ಸರ್ಕಾರಗಳು ಹಿಂದೇಟು ಹಾಕಿದವು. ಇದೀಗ ನಮ್ಮ ಸರ್ಕಾರ ಈ ವರದಿಯನ್ನು ಸ್ವೀಕರಿಸಲಿದೆ. ವಸ್ತು ಸ್ಥಿತಿಯನ್ನು ಆಧರಿಸಿ, ಜನರಿಗೆ ಶಿಕ್ಷಣ, ಉದ್ಯೋಗ, ಉದ್ಯಮ ಹೀಗೆ ವಿವಿಧ ವಲಯಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ