ಈ ಸಂಬಂಧ ಅಧಿಕಾರಿಗಳ ಜತೆ ಸಭೆ ನಡೆಸಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರ ತೆಗದು ಹಾಕಲು ಸೂಚಿಸಿದ್ದಾರೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಎಚ್ಚರ ವಹಿಸಲು ಸೂಚಿಸಿದ್ದಾರೆ.
ಯಾವುದೇ ಫ್ಲೆಕ್ಸ್, ಪೋಸ್ಟರ್, ಬ್ಯಾನರ್, ಬಿತ್ತಿಪತ್ರಗಳು, ಗೋಡೆ ಬರಹಗಳನ್ನು ತೆಗೆದು ಹಾಕಬೇಕು. ಅದಲ್ಲದೆ ಕುಡಿಯುವ ನೀರಿನ ಘಟಕ, ಉದ್ಯಾನವನ ಸೇರಿದಂತೆ ಇನ್ನಿತರೆ ಸ್ಥಳಗಳಲ್ಲಿ ಅಳವಡಿಸಿರುವ ನಾಮಫಲಕಗಳಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರದಲ್ಲಿ ಅದನ್ನು ತೆಗೆಯುವಂತೆ ಸೂಚಿಸಿದ್ದಾರೆ.
ಸರ್ಕಾರದ ವೆಬ್‌ಸೈಟ್‌ಗಳಲ್ಲಿ ಪ್ರಕಟವಾಗಿರುವ ರಾಜಕೀಯ ಪ್ರತಿನಿಧಿಗಳ ಭಾವಚಿತ್ರಗಳನ್ನು 24 ಗಂಟೆಯೊಳಗೆ ತೆಗೆದು ಹಾಕಬೇಕು. ಆರ್‌ಒ, ಎಆರ್‌ಒ ಕಚೇರಿಗಳಲ್ಲಿ ನಿಯಂತ್ರಣ ಕೊಠಡಿ ಸ್ಥಾಪನೆಗೆ, ಎಫ್‌ಎಸ್‌ಟಿ, ಎಸ್‌ಎಸ್‌ಟಿ ಸೇರಿದಂತೆ ಇನ್ನಿತರೆ ತಂಡಗಳನ್ನ ಸಕ್ರಿಯಗೊಳಿಸುವಂತೆ ಅಧಿಕಾರಿಗಳ ಆಂತರಿಕ ಸಭೆಯಲ್ಲಿ ಸೂಚನೆ ನೀಡಲಾಗಿದೆ.