ಬೆಲೆ ಏರಿಕೆ ಕಾಂಗ್ರೆಸ್‌ನ ಆರನೇ ಗ್ಯಾರಂಟಿ: ಸಿಟಿ ರವಿ ವ್ಯಂಗ್ಯ

Sampriya

ಮಂಗಳವಾರ, 25 ಜೂನ್ 2024 (14:52 IST)
Photo Courtesy X
ಕಲಬುರಗಿ: ಕಾಂಗ್ರೆಸ್ ಸರ್ಕಾರದಲ್ಲಿ ನಿರಂತರವಾಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ಮುದ್ರಾಂಕ ಶುಲ್ಕ, ಜನನ ಮರಣ ಪ್ರಮಾಣಪತ್ರ ಪಡೆಯುವ ಶುಲ್ಕ ಹೆಚ್ಚಳ, ಅಬಕಾರಿ ಸುಂಕ ಏರಿಕೆಯ ಜತೆಗೆ ಇದೀಗ ಹಾಲಿನ ಬೆಲೆ ಏರಿಕೆ ಮಾಡುವುದರೊಂದಿಗೆ ರಾಜ್ಯದ ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆಯೆಂಬ ಅಘೋಷಿತ ಆರನೇ ಗ್ಯಾರಂಟಿಯನ್ನು ಜಾರಿಗೆ ತಂದಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ವ್ಯಂಗ್ಯ ಮಾಡಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದಲ್ಲಿ ಇಂಧನ ಬೆಲೆಯನ್ನು ಕೇವಲ 1 ರೂಪಾಯಿ ಹೆಚ್ಚಳ ಮಾಡಿದ್ದಕ್ಕೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಎಂ.ಬಿ. ಪಾಟೀಲ, ಪ್ರಿಯಾಂಕ್ ಖರ್ಗೆ ಅವರು ಸ್ಕೂಟರ್‌ವೊಂದನ್ನು ಹೆಣದಂತೆ ಇರಿಸಿ ಆಕ್ರೋಶ ಹೊರಹಾಕಿದ್ದರು.

ಇದೀಗ  ಪೆಟ್ರೋಲ್, ಡೀಸೆಲ್ ಬೆಲೆಯನ್ನು ₹ 3 ಹೆಚ್ಚಳ ಮಾಡಿದ್ದಾರೆ. ಕೆಲ ತಿಂಗಳ ಹಿಂದೆ ಸೆಸ್ ಏರಿಸಿದ್ದು ಸೇರಿ ಒಟ್ಟಾರೆ ₹ 4.5 ಹೆಚ್ಚಳ ಮಾಡಿದ್ದಾರೆ. ಈಗ ಸ್ಕೂಟರ್ ಬದಲು ನಾವು ಯಾರನ್ನು ಹೊತ್ತುಕೊಂಡು ಆಕ್ರೋಶ ಹೊರಹಾಕಬೇಕೆಂದು ಪ್ರಶ್ನಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ