ಬೆಂಗಳೂರು : ಸರ್ಕಾರಿ ಆಸ್ಪತ್ರೆಗಳಲ್ಲಿ, ವೈದ್ಯಕೀಯ ಕಾಲೇಜುಗಳಲ್ಲಿ ಅಗ್ನಿ ಅವಘಡದಂತಹ ಘಟನೆಗಳನ್ನು ತಡೆಯಲು ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸೂಚನೆ ನೀಡಿದರು.
ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲೂ ಅಗ್ನಿ ಸುರಕ್ಷತಾ ಕ್ರಮಗಳನ್ನು ಅನುಸರಿಸಲು ಒತ್ತು ನೀಡಲಾಗಿದೆ. ಕೆಲ ದಿನಗಳ ಹಿಂದೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜೊತೆ ನಡೆದ ವೀಡಿಯೋ ಸಂವಾದದ ವೇಳೆ, ಪ್ರಧಾನಿಗಳು ಆಸ್ಪತ್ರೆಗಳಲ್ಲಿ ಅಗ್ನಿ ಸುರಕ್ಷಾ ಕ್ರಮಗಳನ್ನು ಅನುಸರಿಸುವ ಬಗ್ಗೆ ಸಲಹೆ, ಸೂಚನೆಗಳನ್ನು ನೀಡಿದ್ದರು ಎಂದು ತಿಳಿಸಿದರು.
ಅಗ್ನಿ ಸುರಕ್ಷತಾ ಕ್ರಮಗಳನ್ನು ಕೈಗೊಂಡು ನಂತರ ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಮೂಲಕ ಎಲ್ಲಾ ಆಸ್ಪತ್ರೆಗಳು ನಿರಪೇಕ್ಷಣಾ ಪತ್ರ ಪಡೆಯಬೇಕಿದೆ. ಮೇ 21ರ ತನಕ ಕಾಲಮಿತಿಯನ್ನು ಕೂಡ ನೀಡಲಾಗಿದೆ.
16 ಜಿಲ್ಲಾ ಆಸ್ಪತ್ರೆಗಳು, 150 ತಾಲೂಕು ಆಸ್ಪತ್ರೆಗಳಿಗೆ ಈಗಾಗಲೇ ಈ ಬಗ್ಗೆ ಸೂಚನೆಯನ್ನು ಕೂಡ ನೀಡಲಾಗಿದೆ ಎಂದು ಮಾಹಿತಿ ನೀಡಿದರು.