ಸರಕಾರಿ, ಖಾಸಗಿ ನೌಕರರಿಗೆ ಮುಖ್ಯ ಮಾಹಿತಿ

ಬುಧವಾರ, 6 ಮೇ 2020 (15:33 IST)
ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಸರ್ಕಾರಿ ನೌಕರರು, ಖಾಸಗಿ ಸಂಸ್ಥೆಯವರು ಮುಖ್ಯವಾದ ಮಾಹಿತಿ ಇದಾಗಿದೆ.

ಸರ್ಕಾರಿ ನೌಕರರು, ಖಾಸಗಿ ಸಂಸ್ಥೆಯವರು ಹಾಗೂ ಸಾರ್ವಜನಿಕರು ಗೃಹ ಮತ್ತು ವ್ಯವಹಾರಗಳ ಸಚಿವಾಲಯ ನಿರ್ದೇಶನದ ಅಂಶಗಳನ್ನು ತಪ್ಪದೇ ಪಾಲಿಸುವಂತೆ ಯಾದಗಿರಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್ ಸೂಚಿಸಿದ್ದಾರೆ.

ಸಾರ್ವಜನಿಕ, ಕೆಲಸದ ಸ್ಥಳಗಳಲ್ಲಿ ಕಡ್ಡಾಯವಾಗಿ ಮುಖಗವಸು ಧರಿಸಬೇಕು. ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹೊರಡಿಸಲಾದ ನಿರ್ದೇಶನದಂತೆ ಎಲ್ಲಾ ಸಾರ್ವಜನಿಕ ಸ್ಥಳಗಳ ಉಸ್ತುವಾರಿಯನ್ನು ಹೊಂದಿರುವ ವ್ಯಕ್ತಿಗಳು, ಕೆಲಸದ ಸ್ಥಳ ಮತ್ತು ಸಾರಿಗೆ ಸ್ಥಳಗಳಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳತಕ್ಕದ್ದು. ಯಾವುದೇ ಸಂಸ್ಥೆ, ವ್ಯವಸ್ಥಾಪಕರು ಸಾರ್ವಜನಿಕ ಸ್ಥಳಗಳಲ್ಲಿ 5 ಕ್ಕಿಂತ ಹೆಚ್ಚು ಜನ ಸೇರದಂತೆ ಕ್ರಮವಹಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು ಶಿಕ್ಷಾರ್ಹ ಹಾಗೂ ದಂಡನೀಯ ಅಪರಾಧವಾಗಿದೆ ಎಂದು ಅವರು ತಿಳಿಸಿದ್ದಾರೆ.

ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಕಚೇರಿಗಳಲ್ಲಿ ಸುವ್ಯವಸ್ಥಿತವಾದ ಜ್ವರ ತಪಾಸಣೆಗಾಗಿ ಹಾಗೂ ಸ್ಯಾನಿಟೈಸರ್‌ಗಳ ಬಳಕೆಗೆ ಕಡ್ಡಾಯ ವ್ಯವಸ್ಥೆ ಮಾಡಬೇಕು. 65 ವರ್ಷಕ್ಕಿಂತ ಮೇಲ್ಪಟ್ಟ, ಇತರೆ ರೋಗದಿಂದ ಅಸ್ವಸ್ಥತೆಯಿಂದ ಬಳಲುತ್ತಿರುವ, 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಪಾಲಕರು ಮನೆಯಿಂದ ಕೆಲಸ ಮಾಡಲು ಪ್ರೋತ್ಸಾಹಿಸಬೇಕು. ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಕಚೇರಿಗಳಲ್ಲಿ ಆರೋಗ್ಯ ಸೇತು ಮೊಬೈಲ್ ಆ್ಯಪ್ ಬಳಕೆ ಮಾಡಲು ಪ್ರೋತ್ಸಾಹಿಸಬೇಕು ಎಂದಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ