ಗೃಹಲಕ್ಷ್ಮೀ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಪ್ರಮುಖ ಅಂಶಗಳು
ಗುರುವಾರ, 15 ಜೂನ್ 2023 (12:56 IST)
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಪಿಎಲ್, ಅಂತ್ಯೋದಯ ಕಾರ್ಡ್ದಾರರು ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಸಬಹುದು. ಸೇವಾಸಿಂಧು ಪೋರ್ಟಲ್, ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಬಹುದು.
• ಅರ್ಜಿದಾರರು 16-06-2023 ರಿಂದ ಅರ್ಜಿ ಸಲ್ಲಿಸಬಹುದಾಗಿರುತ್ತದೆ
• ಅರ್ಜಿಗಳನ್ನು ಆನ್ಲೈನ್ ಮೂಲಕ ಅಥವಾ ಭೌತಿಕವಾಗಿ ಗ್ರಾಮ ಒನ್/ಬೆಂಗಳೂರು ಒನ್/ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ಮೂಲಕ ಸಲ್ಲಿಸಬಹುದಾಗಿದೆ (https://sevasindhugs.karnataka.gov.in/gruhalakshmi)
• ಅರ್ಜಿ ಸಲ್ಲಿಕೆಗೆ SMS ಮೂಲಕ ಹಾಗೂ ಸೇವಾಸಿಂಧು ಪೋರ್ಟಲ್ ಮೂಲಕ Auto generated ಸ್ವೀಕೃತಿಗಳನ್ನು ಪಡೆಯಬಹುದಾಗಿದೆ.
• ಅರ್ಜಿ ಸಲ್ಲಿಸಲು ಅರ್ಜಿದಾರರ ಹಾಗೂ ಪತಿಯ ಆಧಾರ್ ಕಾರ್ಡ್ ಸಂಖ್ಯೆ ಮೊಬೈಲ್ ಸಂಖ್ಯೆ ಹಾಗೂ ಅರ್ಜಿದಾರರ ಬ್ಯಾಂಕ್ ಖಾತೆ ವಿವರಗಳು ಅಗತ್ಯವಾಗಿರುತ್ತದೆ.
• ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ವಿಧಿಸಲಾಗುವುದಿಲ್ಲ, ಸಂಪೂರ್ಣ ಉಚಿತವಾಗಿದ್ದು, ಅರ್ಜಿದಾರರು ಮಧ್ಯವರ್ತಿಗಳ ಮೇಲೆ ಅವಲಂಬಿತರಾಗದೆ ಅರ್ಜಿಯನ್ನು ಸ್ವತ ಮೇಲೆ ತಿಳಿಸಿದ ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿರುತ್ತದೆ.
• ಅರ್ಜಿ ಸಲ್ಲಿಕೆಗೆ ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ಯೋಜನೆಯ ಕುರಿತಂತೆ ಸಂದೇಹ/ ಕುಂದುಕೊರತೆಗಳಿದ್ದಲ್ಲಿ ಸಹಾಯವಾಣಿ (Helpline) – 1902 ಗೆ ಸಂಪರ್ಕಿಸಬಹುದಾಗಿದೆ.