ಕ್ಷಣಾರ್ಧದಲ್ಲಿ ನಡುರಸ್ತೆಯಲ್ಲಿ ಹೊತ್ತಿ ಉರಿದ ಬೈಕ್

geetha

ಶನಿವಾರ, 27 ಜನವರಿ 2024 (14:25 IST)
ಬೆಂಗಳೂರು-ಚಲಿಸುತ್ತಿದ್ದ ಬೈಕ್ ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ.ಡಿಯೋ ಬೈಕ್ ಗೆ ಆಕಸ್ಮಿಕವಾಗಿ ಬೆಂಕಿ  ಹೊತ್ತಿಕೊಂಡಿದ್ದು,ಎಲೆಕ್ಟ್ರಾನಿಕ್ ಸಿಟಿ ಸಮೀಪ ಬೈಕ್ ಹೊತ್ತಿ ಉರಿದಿದೆ.ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಚಲಿಸುತ್ತಿರುವಾಗಲೇ ಏಕಾಏಕಿ ಬೈಕ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ರಸ್ತೆಯಲ್ಲಿ ಧಗಧಗನೆ ಡಿಯೋ ಬೈಕ್ ಹೊತ್ತಿ ಉರಿದಿದೆ.ದ್ವಿಚಕ್ರ ವಾಹನ ಸವಾರ ಸಮಯಪ್ರಜ್ಞೆಯಿಂದ ಅನಾಹುತ ತಪ್ಪಿದೆ.ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಬೈಕ್ ಸೈಡ್ ಗೆ ಸವಾರ ನಿಲ್ಲಿಸಿದ್ದಾನೆ.ಎಂಜಿನ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಹೊತ್ತಿಕೊಂಡಿರುವ ಸಾದ್ಯತೆ ಇದೆ.ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ