ಬಿಬಿಎಂಪಿಯಲ್ಲಿ 3 ಸಾವಿರ ಕೋಟಿ ಹಗರಣ, ನಾಳೆ ದಾಖಲೆ ಬಿಡುಗಡೆ: ಯಡಿಯೂರಪ್ಪ

ಗುರುವಾರ, 23 ಫೆಬ್ರವರಿ 2017 (16:43 IST)
ಬಿಬಿಎಂಪಿಯಲ್ಲಿ 3 ಸಾವಿರ ಕೋಟಿ ರೂಪಾಯಿಗಳ ಹಗರಣ ನಡೆದಿದ್ದು ನಾಳೆ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಐಟಿ ದಾಳಿಗೊಳಗಾದ ಸಚಿವ ರಮೇಶ್ ಜಾರಕಿಹೊಳಿ, ಶಾಸಕ ಎಂಟಿಬಿ ನಾಗರಾಜ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿದರು.
 
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಭ್ರಷ್ಟಾಚಾರ ತಂಡಾವವಾಡುತ್ತಿದ್ದರೂ ಮೌನವಾಗಿದ್ದಾರೆ. ಅವರು ಮೌನವಾಗಿರುವುದು ನೋಡಿದಲ್ಲಿ ಪರೋಕ್ಷವಾಗಿ ಅವರು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎನ್ನುವ ಸಂದೇಹ ಬರುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಕಾಂಗ್ರೆಸ್ ಸರಕಾರದ ವರ್ತನೆಯಿಂದ ಬೇಸತ್ತ ಅನೇಕ ಹಿರಿಯ ಕಾಂಗ್ರೆಸ್ ಮುಖಂಡರು ಇದೀಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲು ಬಯಸಿದ್ದಾರೆ ಎಂದರು.
 
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ 150 ಕ್ಷೇತ್ರಗಳಲ್ಲಿ ಜಯಗಳಿಸುವ ಮೂಲಕ ಅಧಿಕಾರದ ಗದ್ದುಗೆಯನ್ನು ಅಲಂಕರಿಸಲಿದೆ. ಇದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ