ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸುಪ್ರೀಂಕೋರ್ಟ್ ಸಿಬಿಐಗೆ ವಹಿಸಿದ್ದು, ಸಿಬಿಐ ತನಿಖೆಯಲ್ಲೂ ಸಚಿವ ಕೆ.ಜೆ.ಜಾರ್ಜ್‌ಗೆ ಕ್ಲೀನ್‌ಚಿಟ್ ದೊರೆಯುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ರಾಜ್ಯ ಸರಕಾರ ಡಿ.ಕೆ.ರವಿ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು. ಸಿಬಿಐ ತನಿಖೆಯಲ್ಲಿ ಜಾರ್ಜ್ ಅವರಿಗೆ ಕ್ಲೀನ್‌ಚಿಟ್ ದೊರೆತಿತ್ತು. ಇದೀಗ ಸಿಬಿಐ ತನಿಖೆಯಲ್ಲೂ ಕ್ಲೀನ್ ಚಿಟ್ ದೊರೆಯಲಿದೆ ಎಂದು ತಿಳಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಗುರುತರವಾದ ಪ್ರಕರಣಗಳಿವೆ ಅವರು ರಾಜೀನಾಮೆ ನೀಡಿದ್ದಾರಾ? ಕೇಂದ್ರ ಸಚಿವ ಅನಂತ್ ಕುಮಾರ್ ಮೇಲೂ ಹುಡ್ಕೋ ಹಗರಣದ ಕೇಸ್ ನಡೆಯುತ್ತಿದೆ. ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರಾ? ಎಂದು ತಿರುಗೇಟು ನೀಡಿದರು.
ಮಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಯಾವುದೇ ಪಕ್ಷಕ್ಕೆ ರ್ಯಾಲಿ ನಡೆಸಲು ಅನುಮತಿ ನೀಡಲು ಸಾಧ್ಯವಿಲ್ಲ. ಒಂದು ವೇಳೆ ಮೂರು ಪಕ್ಷಗಳು ಒಂದಾಗಿ ರ್ಯಾಲಿ ನಡೆಸಿದಲ್ಲಿ ಅನುಮತಿ ನೀಡಲಾಗುವುದು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.