ಹೊರ ರಾಜ್ಯಗಳಿಂದ ಬಂದವರನ್ನು ಹೀಗೆ ಮಾಡಿ ಎಂದು ಉಸ್ತುವಾರಿ
ಕೊರೋನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಹೊರರಾಜ್ಯ ಮತ್ತು ಹೊರಜಿಲ್ಲೆಯಿಂದ ಬರುವವರ ಬಗ್ಗೆ ತೀವ್ರ ನಿಗಾವಹಿಸಬೇಕು.
ಜಿಲ್ಲೆಯ ಗಡಿಗಳಲ್ಲಿ ತಪಾಸಣಾ ಶಿಬಿರ ತೆರೆದು, ಜ್ವರ ಸೇರಿದಂತೆ ಕೊರೋನಾ ವೈರಸ್ ಸೋಂಕಿನ ಲಕ್ಷಣಗಳ ಕುರಿತು ಪರೀಕ್ಷಿಸಬೇಕು. ಬಳಿಕ ಅವರನ್ನು 28 ದಿನಗಳ ಕಾಲ ಕ್ವಾರಾಂಟೈನ್‍ನಲ್ಲಿಟ್ಟು ನಿಗಾವಹಿಸಬೇಕು ಎಂದಿದ್ದಾರೆ.
ತೆಲಂಗಾಣದಲ್ಲಿರುವ ಕಲಬುರಗಿ ಜಿಲ್ಲೆಯ ಜನತೆಗೆ ಅಲ್ಲಿಯ ಸರ್ಕಾರ ಪಾಸ್ ಕೊಟ್ಟು ಕಳುಹಿಸುತ್ತಿದೆ. ಗಡಿಯಲ್ಲಿ ಇವರೆಲ್ಲರನ್ನೂ ಕೂಡ ತಪಾಸಣೆ ಮಾಡಿ, ಜಿಲ್ಲೆಯೊಳಗೆ ಕರೆದುಕೊಳ್ಳಬೇಕು ಎಂದಿದ್ದಾರೆ.