ಕಾಂಗ್ರೆಸ್ ಅಡಳಿತದಲ್ಲಿ ಕಾನೂನು ವ್ಯವಸ್ಥೆ ಸತ್ತುಹೋಗಿದೆ: ಯಡಿಯೂರಪ್ಪ ಗುಡುಗು

ಮಂಗಳವಾರ, 14 ಮಾರ್ಚ್ 2017 (15:35 IST)
ಕಾಂಗ್ರೆಸ್ ಅಡಳಿತದಲ್ಲಿ ಕಾನೂನುವ್ಯವಸ್ಥೆ ಸತ್ತುಹೋಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ.
 
ಬೊಮ್ಮಸಂದ್ರದ ಪುರಸಭೆ ಸದಸ್ಯ ಬಿಜೆಪಿ ಮುಖಂಡ ಶ್ರೀನಿವಾಸ್ ಪ್ರಸಾದ್ ಅಲಿಯಾಸ್ ವಾಸು ಬರ್ಬರ ಹತ್ಯೆಯ ನಂತರ ಟ್ವೀಟ್ ಮಾಡಿದ ಅವರು, ವಾಸು ಹತ್ಯೆಗೆ ಕಾರಣರಾದವರನ್ನು ಕೂಡಲೇ ಬಂಧಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
 
ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಹಲವು ಬಿಜೆಪಿ ಮುಖಂಡರು ಹತ್ಯೆಯಾಗಿದ್ದಾರೆ. ಆದಾಗ್ಯೂ ಸರಕಾರ ಯಾವುದೇ ಮುನ್ನೆಚ್ಚರಿಕೆಯ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ವಾಗ್ದಾಳಿ ನಡೆಸಿದರು.
 
ವಾಸು ಹತ್ಯೆ ಖಂಡಿಸಿ ನೂರಾರು ಸಂಖ್ಯೆಯಲ್ಲಿದ್ದ ಬಿಜೆಪಿ ಕಾರ್ಯಕರ್ತರು ಭಾರಿ ಪ್ರತಿಭಟನೆ ವ್ಯಕ್ತಪಡಿಸಿದರು. ಕೊನೆಗೂ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಬೇಕಾಯಿತು

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ