ಕಾಂಗ್ರೆಸ್ ಸರಕಾರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಳ: ಕರಂದ್ಲಾಜೆ ಕಿಡಿ

ಗುರುವಾರ, 5 ಜನವರಿ 2017 (12:40 IST)
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.
 
ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮಹಿಳೆಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಘಟನೆಯನ್ನು ಖಂಡಿಸಿ ಸಂಸದೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಬೆಂಗಳೂರಿನ ಆನಂದರಾವ್ ಸರ್ಕಲ್ ಬಳಿ ಬೃಹತ್ ಪ್ರತಿಭಟನೆ ಕೈಗೊಳ್ಳಲಾಗಿತ್ತು. 
 
ಈ ವೇಳೆ ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ರಾಜಧಾನಿಯ ಮಹಿಳೆಯರಿಗೆ ರಕ್ಷಣೆಯೇ ಇಲ್ಲದಂತಾಗಿದೆ. ಬೇಕಾಬಿಟ್ಟಿಯಾಗಿ ಅಧಿಕಾರಿಗಳ ವರ್ಗಾವಣೆ ಮಾಡುತ್ತಿರುವುದೇ ಇಂತಹ ಘಟನೆಗಳಿಗೆ ಕಾರಣ ಎಂದು ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.  
 
ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಎಂಜಿ ರಸ್ತೆಯಲ್ಲಿ ನೆರೆದಿದ್ದ ಮಹಿಳೆಯರನ್ನು ಲೈಂಗಿಕವಾಗಿ ಹಿಂಸಿಸಿದ್ದರು. ಈ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಭದ್ರತೆಗೆಂದು ಸಾವಿರಾರು ಪೊಲೀಸರ ನಿಯೋಜನೆಗೊಂಡಿದ್ದರಾದರೂ ಕಿಡಿಗೇಡಿಗಳನ್ನು ನಿಯಂತ್ರಿಸಲು ವಿಫಲರಾಗಿದ್ದರು. ಈ ಘಟನೆ ದೇಶಾದ್ಯಂತ ಭಾರೀ ಸುದ್ದಿಯಾಗಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ