ಮೈಸೂರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಆಸ್ತಿಗಳ ಪರಭಾರೆ ಮಾಡುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ.ಅಧಿಕಾರಿಗಳ ನಕಲಿ ಸೀಲ್, ಸಿಗ್ನೇಚರ್ ಪತ್ತೆಯಾಗಿದೆ. ಅಪಾರ ಪ್ರಮಾಣದ ನಕಲಿ ದಾಖಲಾತಿ ಪತ್ತೆ ಸಿಕ್ಕಿದೆ. ಮುಡಾ,ಪಾಲಿಕೆ ಸೇರಿ ಸರ್ಕಾರಿ ಅಧಿಕಾರಿಗಳ ದಾಖಲಾತಿಗಳನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.
ನಕಲಿ ಇ-ಸ್ಟ್ಯಾಂಪ್ ಪೇಪರ್‍ಗಳು, ಲ್ಯಾಪ್‍ಟಾಪ್, ಪ್ರಿಂಟರ್ ಹಾಗೂ ಮೊಬೈಲ್‍ಗಳ ವಶಕ್ಕೆ ಪಡೆಯಲಾಗಿದೆ. ಈ ವಂಚಕರು ಶಾಸಕರೊಬ್ಬರ ತಂದೆಯ ಆಸ್ತಿಗೇ ನಕಲಿ ಮಾಲೀಕನನ್ನು ಸೃಷ್ಟಿಸಿ ಮಾರಾಟ ಮಾಡಿದ್ದರು. ಈ ಸಂಬಂಧ ಮೇಟಗಳ್ಳಿ ಠಾಣೆಯಲ್ಲಿ ಕಳೆದ ಜನವರಿಯಲ್ಲಿ ಪ್ರಕರಣ ದಾಖಲಾಗಿದೆ.ಮೈಸೂರಿನ ರಾಮಕೃಷ್ಣನಗರ ವಿಶ್ವಮಾನವ ಜೋಡಿರಸ್ತೆಗೋಲ್ಡನ್ ಬೆಲ್ಸ್ ಸರ್ವೀಸ್ ಅಪಾರ್ಟ್‍ಮೆಂಟ್‍ನ ಕೊಠಡಿ ಸಂಖ್ಯೆ 301ರಲ್ಲಿ ಪ್ರಕರಣದ ಕಿಂಗ್‍ಪಿನ್ ಬಂಧಿಸಲಾಗಿದೆ. ಡಿಸಿಪಿ ಪ್ರದೀಪ್‍ಗುಂಟಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ