ನೋಟ್‌ ಬ್ಯಾನ್‌ನಲ್ಲೂ ವಿದೇಶ ಪ್ರಯಾಣಕ್ಕೆ ತೆರಳಿದ ರಾಹುಲ್ ಗಾಂಧಿ: ಸಿಂಹ ಲೇವಡಿ

ಸೋಮವಾರ, 9 ಜನವರಿ 2017 (17:26 IST)
ದೇಶಾದ್ಯಂತ 500, 1000 ಮುಖಬೆಲೆಯ ನೋಟ್ ಬ್ಯಾನ್ ಆದ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ 4 ಸಾವಿರ ರೂಪಾಯಿ ಹಣವನ್ನು ಬದಲಾವಣೆ ಮಾಡಿಕೊಂಡಿದ್ದರು. ಇದೀಗ ಅದೇ ಹಣದಲ್ಲಿ ವಿದೇಶ ಪ್ರಯಾಣ ಮಾಡಿ ಬಂದಿದ್ದಾರೆ. ಇದರಿಂದ ತಿಳಿಯುತ್ತೆ ರಾಹುಲ್ ಗಾಂಧಿ ಎಷ್ಟು ಸರಳ ವ್ಯಕ್ತಿ ಎಂದು ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ.
 
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಕಾಏಕಿ ನೋಟ್ ಬ್ಯಾನ್ ಆದ ಬಳಿಕ ಸಾರ್ವಜನಿಕರಿಗೆ ತೊಂದರೆ ಆಗಿದ್ದು ನಿಜ. ಆದರೇ ಇದೀಗ ನಿಧಾನವಾಗಿ ಸಮಸ್ಯೆಗಳು ಬಗೆಹರಿಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ದಿಟ್ಟ ನಿರ್ಧಾರದಿಂದ ಕಾಳಧನಿಕರೂ, ರಿಯಲ್ ಎಸ್ಟೇಟ್ ಮಾಫಿಯಾಗೆ ಕಡಿವಾಣ ಬಿದ್ದಂತಾಗಿದೆ ಎಂದರು.
 
ಕಪ್ಪು ಹಣ ತಡೆಗಟ್ಟುವ ಉದ್ದೇಶದಿಂದ ಪ್ರಧಾನಿ ಮೋದಿ ಅವರು ನೋಟ್ ಬ್ಯಾನ್ ನಿರ್ಧಾರವನ್ನು ಕೈಗೊಂಡಿದ್ದಾರೆ. ಮೋದಿ ಅವರ ದಿಟ್ಟ ನಿರ್ಧಾರಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಆದರೆ, ಕಾಂಗ್ರೆಸ್ ಹೋರಾಟಕ್ಕೆ ದೇಶದ ಜನತೆ ಬೆಂಬಲ ನೀಡಿಲ್ಲ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
 
ಏಕಾಏಕಿ ನೋಟ್ ಬ್ಯಾನ್ ಮಾಡಿದ್ದರಿಂದ ಜನಸಾಮಾನ್ಯರಿಗೆ ತೊಂದರೆ ಆಗಿದ್ದು ನಿಜ. ಆದರೆ, ತೊಂದರೆಯ ನಡುವೆಯೂ ದೇಶದ ಜನತೆ ಮೋದಿ ಅವರ ನಿರ್ಧಾರವನ್ನು ಬೆಂಬಲಿಸಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ