ಬಾಣಂತಿಯರ ಸರಣಿ ಸಾವು ಪ್ರಕರಣ, ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ ಎಂದ ಸಿಎಂ

Sampriya

ಶುಕ್ರವಾರ, 6 ಡಿಸೆಂಬರ್ 2024 (17:55 IST)
ಬೆಂಗಳೂರು: ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ ಪ್ರಕರಣ 5ಕ್ಕೆ ಏರಿದ್ದು, ಇದೀಗ ಈ ಸಂಬಂಧ ಯಾವುದೇ ಮುಲಾಜಿಲ್ಲದೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಇಂದು ನಡೆದ ಕರ್ನಾಟಕ ಸಚಿವ ಸಂಪುಟ ಸಭೆಯಲ್ಲಿ ಬಾಣಂತಿಯರ ಸಾವು ಪ್ರಕರಣದ ಬಗ್ಗೆಯೂ ಚರ್ಚೆ ನಡೆದಿದೆ. ಸಚಿವ ಸಂಪುಟ ಸಭೆಯಲ್ಲಿ ಬಾಣಂತಿಯರ ಸಾವಿನ ಬಗ್ಗೆ ಗಂಭೀರ ಚರ್ಚೆ ನಡೆದಿದ್ದು, ನನ್ನ ಸರ್ಕಾರದಲ್ಲಿ ಅಂಥದ್ದಕ್ಕೆ ಜಾಗವಿಲ್ಲ ಎಂದು ಸಿದ್ದರಾಮಯ್ಯ ಖಡಕ್ ಸಂದೇಶ ರವಾನಿಸಿದ್ದಾರೆ.

ನಂತರ ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವಂತೆ ಖಡಕ್ ಸೂಚನೆ ನೀಡಿದ್ದಾರೆ.

ಬಾಣಂತಿಯರ ಸಾವಿನ ಸಂಖ್ಯೆ ಬಳ್ಳಾರಿ ಜಿಲ್ಲೆಯಲ್ಲಿ ಐದಕ್ಕೆ ಏರಿದೆ. ಇದೇ ವೇಳೆ ಸಿದ್ದರಾಮಯ್ಯ
ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ವಿಸ್ತೃತ ಚರ್ಚೆ ನಡೆದಿದೆ.

ಇದೇ ವೇಳೆ ಸಿದ್ದರಾಮಯ್ಯ, ಬಾಣಂತಿಯರ ಸಾವಿನ ಬಗ್ಗೆ ಮೊದಲು ಪರಿಶೀಲನೆ ನಡೆಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ