ವಿರೋಧದ ನಡುವೆಯೂ ಮತಾಂತರ ನಿಷೇಧ ಮಸೂದೆ ಮಂಡನೆ

ಬುಧವಾರ, 22 ಡಿಸೆಂಬರ್ 2021 (08:19 IST)
ಬೆಳಗಾವಿ : ಪ್ರತಿಪಕ್ಷಗಳ ತೀವ್ರ ವಿರೋಧದ, ಗದ್ದಲದ ನಡುವೆಯೂ ಮಂಗಳವಾರ ವಿಧಾನಸಭೆಯಲ್ಲಿ ಮತಾಂತರ ನಿಷೇಧ ಮಸೂದೆಯನ್ನು ಮಂಗಳವಾರ ಮಂಡಿಸಲಾಯಿತು.

ಭೋಜನ ನಂತರ ಕಲಾಪದ ಬಳಿಕ ವಿಧೇಯಕವನ್ನು ದಿಢೀರ್ ವಿಧೇಯಕ ಮಂಡಿಸಲಾಗಿದೆ. ಕಾಂಗ್ರೆಸ್ ವಿರೋಧಿಸುತ್ತಿದ್ದರೂ ಗೃಹ ಸಚಿವ ಆರಗ ಜ್ಞಾನೇಂದ್ರ ಮಸೂದೆ ಮಂಡಿಸಲು ಮುಂದಾದರು. ಈ ವೇಳೆ ಮಸೂದೆ ಮಂಡನೆಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದರು.

ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣಾ ಹಕ್ಕು-2021 ತಿದ್ದುಪಡಿ ಮಸೂದೆ ಮಂಡಿಸಲಾಯಿತು. ಹೆಚ್ಚುವರಿ ಕಾರ್ಯಸೂಚಿಯಲ್ಲಿ ಮಸೂದೆ ಮಂಡನೆ ಬಗ್ಗೆ ಪ್ರಸ್ತಾಪಿಸಲಾಗಿದೆ. ಚರ್ಚೆ ಮಾಡಿ ಎಂದು ಸ್ಪೀಕರ್ ವಿಶೇಶ್ವರ ಹೆಗಡೆ ಕಾಗೇರಿ ಹೇಳಿದರು. ಈ ವೇಳೆ ಮಧ್ಯ ಪ್ರವೇಶಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು, ಚರ್ಚೆ ಮಾಡಿ ಮೊದಲು ಎಂದು ಮನವಿ ಮಾಡಿದರು.

ಆಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕದ್ದು ಮುಚ್ಚಿ ಮಸೂದೆ ಯಾಕೆ ಮಾಡಿದ್ದೀರಿ ಎಂದು ಖಾರವಾಗಿ ಪ್ರಶ್ನಿಸಿದರು. ಶಿವಕುಮಾರ್ ಮಾತು ವಾಪಸ್ ತೆಗೆದುಕೊಳ್ಳಬೇಕು. ಕದ್ದುಮುಚ್ಚಿ ಮಾಡಿಲ್ಲ, ಅಜೆಂಡಾದಲ್ಲಿ ತಂದೇ ಮಾಡಿರುವುದು ಎಂದ ಸ್ಪೀಕರ್ ಪ್ರತ್ಯುತ್ತರ ನೀಡಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ