ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ

ಶುಕ್ರವಾರ, 21 ಏಪ್ರಿಲ್ 2023 (17:15 IST)
ಎಂದಿನಂತೆ ಪಿಯುಸಿ ಫಲಿತಾಂಶದಲ್ಲಿ ಬಾಲಕೀಯರೇ ಮೇಲುಗೈ ಸಾಧಿಸಿದ್ದು, ಶೇಕಡಾ 80.25ರಷ್ಟು ವಿದ್ಯಾರ್ಥಿನಿಯರು ತೇರ್ಗಡೆ ಹೊಂದಿದ್ದಾರೆ.. ಬಾಲಕರು ಶೇಕಡಾ 69.05 ರಷ್ಟು ಮಂದಿ ಉತ್ತೀರ್ಣರಾಗಿದ್ದಾರೆ. ಗ್ರಾಮೀಣ ಭಾಗದ ಶೇಕಡಾ 74.79 ಮಕ್ಕಳು ತೇರ್ಗಡೆಯಾಗಿದ್ದರೆ, ಶೇಕಡಾ 74.63 ನಗರ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 1,09,509 ಮಂದಿ ಉತ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ರೆ, ಕಲಾ ವಿಭಾಗದಲ್ಲಿ ಬೆಂಗಳೂರಿನ NMKRV ಕಾಲೇಜ್​ನ ತಬಸುಮ್ ಶೇಖ್ 593 ಅಂಕ ಪಡೆದು ಮೊದಲ ಸ್ಥಾನ ಪಡೆದಿದ್ದಾರೆ.. ವಾಣಿಜ್ಯ ವಿಭಾಗದಲ್ಲಿ ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ಅನನ್ಯ 600 ಪಡೆದು ಮೊದಲ ಸ್ಥಾನ ಪಡೆದಿದ್ರೆ, ವಿಜ್ಞಾನ ವಿಭಾಗದಲ್ಲಿ ಗಂಗೋತ್ರಿ ಪಿಯು ಕಾಲೇಜ್ ವಿದ್ಯಾರ್ಥಿ S.M. ಕೌಶಿಕ್ ಹಾಗೂ ಬೆಂಗಳೂರಿನ NMKRV ಕಾಲೇಜಿನ ಸುರಬಿ ಎಸ್ ಮೊದಲ ಸ್ಥಾನ ಪಡೆದಿದ್ದಾರೆ. ಇನ್ನು ಇಂದಿನಿಂದಲೇ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ವಿದ್ಯಾರ್ಥಿಗಳು ತಮ್ಮ ಉತ್ತರ ಪತ್ರಿಕೆಯ ಸ್ಕ್ಯಾನ್ ಮಾಡಿದ ಪ್ರತಿಗಳಿಗೆ ಇಂದಿನಿಂದ ಅರ್ಜಿ ಸಲ್ಲಿಸಬಹುದು. ಸ್ಕ್ಯಾನ್ ಮಾಡಿದ ಪ್ರತಿಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 27. ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡುವಾಗ ಸ್ಕ್ಯಾನ್ ಮಾಡಿದ ಪ್ರತಿಗೆ ರೂ. 530 ಪಾವತಿಸಬೇಕಾಗುತ್ತದೆ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ