ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದೆ: ಕೆ.ಎಸ್.ಈಶ್ವರಪ್ಪ

ಬುಧವಾರ, 23 ಮಾರ್ಚ್ 2016 (17:48 IST)
ರಾಜ್ಯದಲ್ಲಿ ಸಾವಿರಾರು ಕೋಟಿ ರೂಪಾಯಿಗಳ ಅಕ್ರಮ ಮರಳು ಸಾಗಾಣಿಕೆ ನಡೆಯುತ್ತಿದೆ. ತಡೆಯಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಲಾಗುತ್ತಿದೆ ಎಂದು ವಿಧಾನಪರಿಷತ್‌ನ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ.
ವಿಧಾನಪರಿಷತ್‌ನಲ್ಲಿ ವಿಷಯ ಪ್ರಸ್ತಾಪಿಸಿದ ಈಶ್ವರಪ್ಪ, ಅಕ್ರಮ ಮರಳು ಸಾಗಾಣಿಕೆ ತಡೆಯಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಲಾಗುತ್ತಿದೆ. 
ಮರಳು ಮಾಫಿಯಾ ಯಾರ ಕೈಯಲ್ಲಿದೆ ಎನ್ನುವುದನ್ನು ಸರಕಾರ ಬಹಿರಂಗಪಡಿಸಲಿ ಎಂದು ಸವಾಲ್ ಹಾಕಿದರು.
 
ಮರಳು ಕಳ್ಳಸಾಗಾಣೆದಾರರು ಗೂಂಡಾಗಳನ್ನು ಬಿಟ್ಟು ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ ನಡೆಸುತ್ತಿದ್ದಾರೆ. ಹಲವಾರು ಬಾರಿ ಪೊಲೀಸ್ ಅಧಿಕಾರಿಗಳ ಹತ್ಯೆಗೆ ಯತ್ನ ನಡೆದಿದೆ. ಸರಕಾರ ಅಧಿಕಾರಿಗಳ ರಕ್ಷಣೆಗಾಗಿ ಯಾವ ಕ್ರಮ ಕೈಗೊಂಡಿದೆ ಎಂದು ಕಿಡಿಕಾರಿದರು. 
 
ಮೊದಲು ಅಧಿಕಾರಿಗಳಿಗೆ ರಕ್ಷಣೆ ಕೊಡಿ. ಸಾವಿರಾರು ಕೋಟಿ ರೂ ಮೌಲ್ಯದ ಮರಳು ಕಳ್ಳಸಾಗಾಣಿಕೆಯನ್ನು ಅಂತ್ಯಗೊಳಿಸಲು ಕಠಿಣವಾದ ಕಾನೂನು ಜಾರಿಗೆ ತನ್ನಿ ಎಂದು ವಿಧಾನಪರಿಷತ್‌ನ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಸಿಎಂ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.

ವೆಬ್ದುನಿಯಾವನ್ನು ಓದಿ