ಚರಬಸವೇಶ್ವರ ದೇವಸ್ಥಾನದಲ್ಲಿ ಸಂಗೀತ ಸೇವಾ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಡೆದ ಹತ್ತನೇ ವರ್ಷದ ಮಹಿಳಾ ಮಹೋತ್ಸವ ಅದ್ಧೂರಿಯಾಗಿ ಗಮನ ಸೆಳೆಯಿತು. ಮುತ್ತೈದೆಯರಿಗೆ ಉಡಿ ತುಂಬಿ ಸಂಭ್ರಮಿಸಲಾಯಿತು.
ಯಾದಗಿರಿ ಜಿಲ್ಲೆಯ ಶಹಾಪುರ ನಗರದ ಚರಬಸವೇಶ್ವರ ದೇವಸ್ಥಾನದಲ್ಲಿ ಸಂಗೀತ ಸೇವಾ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಹತ್ತನೇ ವರ್ಷದ ಮಹಿಳಾ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಾಸಕ ಶರಣಬಸಪ್ಪಗೌಡ ಉದ್ಘಾಟಿಸಿ ಮಾತನಾಡಿದರು.
ಪ್ರತಿ ವರ್ಷದಂತೆ ಈ ವರ್ಷವೂ ಶ್ರಾವಣ ಮಾಸದಲ್ಲಿ ಮಹಿಳಾ ಮಹೋತ್ಸವ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ನೂರಾರು ಮಹಿಳೆಯರಿಗೆ ಉಡಿ ತುಂಬಿ ಹಾರೈಸಲಾಯಿತು. ಕಳೆದ ಒಂದು ದಶಕದಿಂದ ಈ ಸಂಪ್ರದಾಯ ನಡೆಯುತ್ತ ಬಂದಿದೆ.
ಇನ್ನು ಸಮಿತಿ ಅಧ್ಯಕ್ಷ ಶರಣು ಗದ್ದುಗೆ ಮಾತನಾಡಿ, ಚರಬಸವೇಶ್ವರ ದೇವರ ಕೃಪೆಯಿಂದ ಎಲ್ಲವೂ ಶಾಂತಿಯುತವಾಗಿ ನಡೆಯುತ್ತಿದೆ. ಹಿರಿಯರ ಕಾಲದಿಂದ ಮುತ್ತೈದೆಯರಿಗೆ ಉಡಿ ತುಂಬುವ ಸಂಪ್ರದಾಯ ನಮ್ಮ ದೇವಸ್ಥಾನದಲ್ಲಿ ನಡೆಯುತ್ತಿದೆ. ನಾವು ಕೂಡ ಇಂದಿಗೂ ಮುಂದುವರೆಸಿಕೊಂಡು ಹೋಗುತ್ತಿದ್ದೇವೆ ಎಂದರು.