ಫೆಬ್ರವರಿಯಲ್ಲಿ ದಶಪಥ ಹೆದ್ದಾರಿ ಉದ್ಘಾಟನೆ

ಶುಕ್ರವಾರ, 6 ಜನವರಿ 2023 (12:14 IST)
ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಫೆಬ್ರವರಿ ಅಂತ್ಯಕ್ಕೆ ಉದ್ಘಾಟನೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ದ್ರೌಪದಿ ಮುರ್ಮು ಅವರು ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಗಡ್ಕರಿ ತಿಳಿಸಿದರು. 

ಈ ಹೆದ್ದಾರಿಯು ಕರ್ನಾಟಕದ ಆರ್ಥಿಕ ಪ್ರಗತಿಗೆ ಹೊಸ ಭಾಷ್ಯ ಬರೆಯಲಿದೆ. ಕೈಗಾರಿಕೆಗಳ ಪ್ರಗತಿಗೆ ನೂತನ ಹೆದ್ದಾರಿ ಅನುಕೂಲ ಆಗಲಿದೆ. ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಹಾಗೂ ಕೆಲ ಸಂಚಾರ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ.

ಈ ಹೆದ್ದಾರಿಯಿಂದ ಮೈಸೂರು ಭಾಗದಲ್ಲಿ ಆರ್ಥಿಕ ಚಟುವಟಿಕೆ ಅಭಿವೃದ್ಧಿಗೂ ಸಹಕಾರಿಯಾಗಲಿದೆ. ಮಾಲಿನ್ಯ, ಟ್ರಾಫಿಕ್ ಜಾಮ್ ಜೊತೆ ಅಪಘಾತಗಳ ಸಂಖ್ಯೆ ಕ್ಷೀಣಿಸುವಂತೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ