ಚಿಕ್ಕಬಳ್ಳಾಪುರ ತಾಲೂಕಿನ ಕೌರನಹಳ್ಳಿ ಲಿಂಗಶೆಟ್ಟಿಪುರ ಗ್ರಾಮಗಳ ನಂತರ ಜಾಲಾರಿ ನರಸಿಂಹ ಸ್ವಾಮಿ ದೇವಾಲಯದ ನರಸಿಂಹದೇವರಬೆಟ್ಟದ ತಪ್ಪಲಿನಲ್ಲಿ ಇಶಾ ಫೌಂಡೇಶನ್ ವತಿಯಿಂದ ತಮಿಳುನಾಡಿನ ಕೊಯಮತ್ತೂರಿನಲ್ಲಿರುವಂತೆ 112 ಅಡಿಯ ಆದಿಯೋಗಿ ಶಿವನ ಪ್ರತಿಮೆ ನಿರ್ಮಾಣ ಕಾರ್ಯ ಬಹುತೇಕ ಮುಕ್ತಾಯವಾಗಿದೆ.ಅದಿಯೋಗಿ ಶಿವನ ಅವತಾರದ ಪ್ರತಿಮೆ ನಿರ್ಮಾಣದ ಕಾರ್ಯದ ಅಂಗವಾಗಿ ಇಶಾ ಫೌಂಡೇಶನ್ ವತಿಯಿಂದ ಮೊದಲ ಕಾರ್ಯಕ್ರಮವಾಗಿ ನಾಗಮಂಟಪ ಲೋಕಾರ್ಪಣೆ ನೇರವೇರಿತು. ಕಾರ್ಯಕ್ರಮಕ್ಕೆ ಸ್ವತಃ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಸಚಿವ ಕೆ ಸುಧಾಕರ್ ಆಗಮಿಸಿದ್ದರು.