ವಿಷ್ಣು ಸ್ಮಾರಕ ಲೋಕಾರ್ಪಣೆ : ಜನವರಿ 29ರಂದು ಸಿಎಂ ಉದ್ಘಾಟನೆ
ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ ಸ್ಮಾರಕ ಲೋಕಾರ್ಪಣೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ.
ಇದೇ ತಿಂಗಳ 29 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವ್ಯವಾದ ವಿಷ್ಣು ಸ್ಮಾರಕವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಮೈಸೂರಿನ ಎಚ್ಡಿ ಕೋಟೆಯ ಅಲ್ಲಾಳು ಗ್ರಾಮದಲ್ಲಿ ಐದು ಎಕರೆ ಜಾಗದಲ್ಲಿ ಸ್ಮಾರಕವನ್ನು ನಿರ್ಮಾಣ ಮಾಡಲಾಗಿದೆ.
ವಿಷ್ಣುವರ್ಧನ್ ಅವರಿಗೆ ಸಂಬಂಧಿಸಿದ ಗ್ಯಾಲರಿ, ಆಡಿಟೋರಿಯಂ, ವಿಷ್ಣು ಪುತ್ಥಳಿ, ಕ್ಲಾಸ್ ರೂಮ್, ಕ್ಯಾಂಟೀನ್ ಏರಿಯಾ, ಹೀಗೆ ಈ ಸ್ಮಾರಕದಲ್ಲಿ ಹತ್ತು ಹಲವು ವಿಶೇಷತೆಗಳಿವೆ.